
ಸಂಗ್ರಹ ಚಿತ್ರ
ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ.
ಮೃತ ಬಾಲಕರನ್ನು 13 ವರ್ಷದ ಕಿರಣ್, 13 ವರ್ಷದ ತೀರ್ಥ ಮತ್ತು 14 ವರ್ಷದ ಫೈಜಲ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಫೇಸ್ ಬುಕ್ ನಲ್ಲಿ ಲವ್; ಮಹಿಳೆಗೆ ಬೆತ್ತಲೆ ಫೋಟೋ ಶೇರ್ ಮಾಡಿ ತಗ್ಲಾಕೊಂಡ ಭೂಪ!
ನಿನ್ನೆ ಸಂಜೆ ಆಟ ಆಡಲು ಹೊರ ಹೋಗಿದ್ದ ತೀರ್ಥ ಮತ್ತು ಫೈಜಲ್ ರಾತ್ರಿ ಆದರೂ ಮನೆಗೆ ಬಾರದ ಹಿನ್ನೆಲೆ ಪೋಷಕರು ಹುಡುಕಾಡಿದ್ದು ಕೆರೆ ಬಳಿ ಬಾಲಕರ ಸೈಕಲ್, ಬಟ್ಟೆ ಮತ್ತು ಚಪ್ಪಲಿ ಪತ್ತೆಯಾಗಿವೆ. ಈಜು ಬಾರದಿದ್ದರು ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ.
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.