ಚಿರತೆ ಸೆರೆ ಕಾರ್ಯಾಚರಣೆ
ಚಿರತೆ ಸೆರೆ ಕಾರ್ಯಾಚರಣೆ

ಬೆಂಗಳೂರು: 3 ದಿನಗಳ ನಂತರ ಸೆರೆ ಸಿಕ್ಕ ಚಿರತೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಬಲೆಗೆ ಬಿದ್ದಿತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದೆ.
Published on

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಬಲೆಗೆ ಬಿದ್ದಿತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದೆ.

ಇಂದು ಬೆಳಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಕೃಷ್ಣಾರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿತ್ತು.

ಇಂದು ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಅದರ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಸಾವನ್ನಪ್ಪಿದೆ.

ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಿನಿಂದ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರಿತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com