ಉಡುಪಿ: ತುಲಾಭಾರದ ವೇಳೆ ತಕ್ಕಡಿ ಕಳಚಿ ಬಿದ್ದು ಪೇಜಾವರ ಶ್ರೀಗಳಿಗೆ ಗಾಯವಾಗಿರುವ ಘಟನೆ ನಡೆದಿದೆ. ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ದೆಹಲಿಯ ಪೇಜಾವರ ಮಠದಲ್ಲಿ ಭಕ್ತರು ಸ್ವಾಮೀಜಿಗೆ ತುಲಾಭಾರ ನಡೆಸುತ್ತಿದ್ದಾಗ ಹಗ್ಗ ತುಂಡಾಗಿ ತಕ್ಕಡಿ ಬಿದ್ದಿದೆ. ಆದರೆ, ಶ್ರೀಗಳಿಗೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ಮಠದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ತುಲಾಭಾರದ ವೇಳೆ ತಕ್ಕಡಿ ಹಗ್ಗ ತುಂಡಾದ ಪರಿಣಾಮ ಪೇಜಾವರ ಶ್ರೀಗಳ ತಲೆ ಮೇಲೆ ತಕ್ಕಡಿಯ ಸರಳು ಕಳಚಿ ಬಿದ್ದಿದೆ. ಅದೃಷ್ಟವಶಾತ್ ಶ್ರೀಗಳು ತರಚಿದ ಗಾಯದೊಂದಿಗೆ ಪಾರಾಗಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಲ್ಲಿನ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ ಘಟನೆ ನಡೆದಿದೆ.
ಇನ್ನು ಘಟನೆ ನಡೆದ ಎರಡು ದಿನದಲ್ಲಿ ಗಾಯ ಪೂರ್ಣ ಮಾಸಿಹೋಗಿದೆ. ಗಾಯದ ಕುರುಹು ಇಲ್ಲದಂತೆ ವಾಸಿಯಾಗಿದೆ. ದೊಡ್ಡ ಗಾಯ ಏನು ಆಗಿಲ್ಲ ನಾನು ಆರಾಮವಾಗಿದ್ದೇನೆ. ಯಾರೂ ಗಾಬರಿಯಾಗಬೇಕಾಗಿಲ್ಲ. ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ದೆಹಲಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
Advertisement