ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ, ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಪ್ರದೇಶದಲ್ಲಿ ಆತಂಕ

ಇತ್ತೀಚೆಗಷ್ಟೇ ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ರಾಜಧಾನಿಯ ಜನತೆ ನಿಟ್ಟಿಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ.
ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ
ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ

ಬೆಂಗಳೂರು: ಇತ್ತೀಚೆಗಷ್ಟೇ ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ರಾಜಧಾನಿಯ ಜನತೆ ನಿಟ್ಟಿಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ.

ಹೌದು.. ಬೆಂಗಳೂರು ನಗರ ನಿವಾಸಿಗಳಿಗೆ ಮತ್ತೆ ಚಿರತೆ (Leopard) ಆತಂಕ ಶುರುವಾಗಿದ್ದು, ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು (Chikkathoguru) ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ (ನವೆಂಬರ್ 04) ರ ಸಂಜೆ 7.40ರ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಶನಿವಾರ ಸಂಜೆ ಚಿರತೆ ಮನೆ ಕಂಪೌಂಡ್​​ ಒಳಗೆ ನುಗ್ಗಿದ್ದು, ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ. ಬಾಲಕನ ಕಿರುಚಾಟಕ್ಕೆ ಚಿರತೆ ಓಡಿ ಹೋಗಿದೆ ಎಂದು ತಿಳಿದುಬಂದಿದೆ.

ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಿ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶನಿವಾರ ಮಳೆ ಬಂದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚಿಕ್ಕತೋಗೂರು ಸುತ್ತಮುತ್ತ ನೈಸ್ ರಸ್ತೆ ಜಾಗದಲ್ಲಿ ಆಗಾಗ ಚಿರತೆ ಓಡಾಟ ಕಂಡುಬರುತ್ತಿದೆ.

ಬೊಮ್ಮನಹಳ್ಳಿಯಲ್ಲಿ ಗುಂಡೇಟಿನಿಂದ ಸಾವಿಗೀಡಾದ ಚಿರತೆ
ಕೆಲ ದಿನಗಳ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯ ಕೂಡ್ಲುಗೇಟ್‌ ಸುತ್ತ ಮುತ್ತ ಚಿರತೆ ಓಡಾಡುತ್ತಿತ್ತು. ಇಲ್ಲಿನ ಪ್ರತಿಷ್ಠಿತ cadenza ಅಪಾರ್ಟ್ ಮೆಂಟ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಬೆಳಗ್ಗೆ ಹೊತ್ತಿನಲ್ಲಿ ಕಾಣಿಸಿಕೊಳ್ಳದ ಚಿರತೆ ರಾತ್ರಿ ರಾಜಾರೋಷವಾಗಿ ಓಡಾಡುತ್ತಿತ್ತು. ಇದರಿಂದ ಸ್ಥಳೀಯರು ಭಯ ಭೀತರಾಗಿದ್ದರು. ಬೊಮ್ಮನಹಳ್ಳಿಯ ಸಿಂಗಸಂದ್ರ, ಹೊಸಪಾಳ್ಯ, ಕೂಡ್ಲು ಭಾಗದ ನಾಗರಿಕರು ಭಯದಲ್ಲಿಯೇ ದಿನದೂಡುತ್ತಿದ್ದರು.

ಚಿರತೆಗೆ ಹೆದರಿ ಕತ್ತಲಾಗುತ್ತಿದ್ದಂತೆ ಈ ಪ್ರದೇಶದ ಜನರು ಮನೆ ಸೇರುತ್ತಿದ್ದರು. ಆತಂಕ ಸೃಷ್ಟಿಸಿರುವ ಚಿರತೆಯನ್ನು ಕೂಡಲೇ ಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದರು. ಅದರಂತೆ ಅರಣ್ಯ ಇಲಾಖೆ ಸಿಬ್ಬಂದಿ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದ ಕೂಡ್ಲುಗೇಟ್​ನ ಕೃಷ್ಣಾರೆಡ್ಡಿಪಾಳ್ಯದ ಪಾಳುಬಿದ್ದ ಕಟ್ಟಡದಲ್ಲಿ ಸೆರೆ ಹಿಡಿದಿದ್ದರು. ಆದರೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಚಿರತೆ ಮೃತಪಟ್ಟಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com