ಧಾರವಾಡ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ.
ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸದ್ಯ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೂವರು ಯುವಕರು ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಬೈಕ್‌ನಲ್ಲಿ ನವಲಗುಂದದಿಂದ ಧಾರವಾಡಕ್ಕೆ ಬರುತ್ತಿದ್ದರು. ಈ ವೇಳೆ ಬೈಕ್ ಹಾಗೂ ಕ್ರೂಸರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement