ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ; ಪಕ್ಷದ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ: ಪ್ರಲ್ಹಾದ್ ಜೋಶಿ

ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ.
ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Updated on

ಹುಬ್ಬಳ್ಳಿ: ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಂತರ ಪಕ್ಷದ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

'ಯಾವುದೇ ಅಸಮಾಧಾನವಿದ್ದರೆ ಚರ್ಚೆಯ ಮೂಲಕವೇ ಕುಳಿತು ಬಗೆಹರಿಸಿಕೊಳ್ಳುತ್ತೇವೆ. ವಿಜಯೇಂದ್ರ, ಯಡಿಯೂರಪ್ಪ ಮತ್ತು ನಾನು ಒಟ್ಟಿಗೆ ಕುಳಿತು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ. ಪಕ್ಷದಿಂದ ಜನರು ನಿರೀಕ್ಷೆ ಇಟ್ಟುಕೊಂಡಿರುವ ಕಾರಣ ವಿಜಯೇಂದ್ರ ಅವರು ಎಲ್ಲರನ್ನೂ ಭೇಟಿಯಾಗುವ ವಿಶ್ವಾಸವಿದೆ' ಎಂದು ಹೇಳಿದರು.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತ ಪ್ರಕಾಶಿಸುತ್ತಿದೆ ಮತ್ತು ನೆಲದ ಸಂಸ್ಕೃತಿಯು ಜಗತ್ತನ್ನು ಆಕರ್ಷಿಸುತ್ತಿದೆ ಮತ್ತು ಎಲ್ಲೆಡೆ ಸ್ವೀಕಾರವನ್ನು ಕಂಡುಕೊಳ್ಳುತ್ತಿದೆ. ಭಾರತೀಯ ಸಂಸ್ಕೃತಿಯು ಎಷ್ಟು ಬೆಳೆದಿದೆ ಎಂದರೆ ಅಮೆರಿಕದ ಶ್ವೇತಭವನದಿಂದ ಇಂಗ್ಲೆಂಡ್‌ನ ಅಧಿಕಾರದ ಕಾರಿಡಾರ್‌ಗಳವರೆಗೆ ಭಾರತೀಯ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂದು ಜೋಶಿ ಹೇಳಿದರು.

ಇದೇ ವೇಳೆ, ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬೆಂಗಳೂರಿನಲ್ಲಿರುವ ಅವರ ಖಾಸಗಿ ನಿವಾಸಕ್ಕೆ ತೆರಳಿ ಅಭಿನಂದಿಸಿದ್ದಾರೆ. ಅಸಮಾಧಾನದ ವದಂತಿಗಳಿಗೆ ತೆರೆ ಎಳೆದ ರವಿ ಸಭೆಯಲ್ಲಿ ವಿಜಯೇಂದ್ರ ಅವರನ್ನು ಅಪ್ಪಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com