ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧನ

ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಡುಪಿ ಕೊಲೆ ಪ್ರಕರಣ
ಉಡುಪಿ ಕೊಲೆ ಪ್ರಕರಣ

ಉಡುಪಿ: ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.  

ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದನು. ಆತನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಉಡುಪಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪ್ರವೀಣ್‌ ಅರುಣ್‌  CISF ಸಿಬ್ಬಂದಿಯಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದರು. ಇನ್ನು ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಅಯ್ನಾಜ್ ಗೆ ಪ್ರವೀಣ್ ಪರಿಚಯವಾಗಿತ್ತು. ಇಬ್ಬರು ಪರಸ್ಪರ ಆತ್ಮೀಯವಾಗಿದ್ದರು. ಆದರೆ ನಂತರ ಅಯ್ನಾಜ್ ಆತನಿಂದ ದೂರವಾಗಿದ್ದಳು. ಇದರಿಂದ ಕುಪಿತನಾಗಿದ್ದ ಪ್ರವೀಣ್ ಆಕೆಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಅಯ್ನಾಜ್ ಳಿಗೆ ಚೂರು ಇರಿಯುತ್ತಿದ್ದಾಗ ಆಕೆಯನ್ನು ರಕ್ಷಿಸಲು ಬಂದ ತಾಯಿ, ಸಹೋದರಿಗೂ ಪ್ರವೀಣ್ ಚೂರಿ ಇರಿದಿದ್ದಾನೆ. ಇನ್ನು ಮನೆಯಲ್ಲಿ ಗಲಾಟೆಯಾಗುತ್ತಿದ್ದುದ್ದನ್ನು ಗಮನಿಸಿದ ಅಸೀಮ್ ಮನೆಗೆ ಓಡಿ ಬಂದಿದ್ದಾನೆ. ಈ ವೇಳೆ ಅಸೀಮ್ ಗೂ ಚೂರಿ ಇರಿದು ಪ್ರವೀಣ್ ಅಲ್ಲಿಂದ ಪರಾರಿಯಾಗಿದ್ದನು. 

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇನ್ನು ಆರೋಪಿ ಉಡುಪಿಗೆ ಬಂದಿದ್ದು ಕೆಲ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇನ್ನು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಉಡುಪಿ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com