ಬೆಂಗಳೂರು-ಧಾರವಾಡ 'ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು' ಸೇವೆ ಬೆಳಗಾವಿಯವರೆಗೆ ವಿಸ್ತರಣೆ, ರೈಲ್ವೆ ಸಚಿವಾಲಯ ಆದೇಶ 

 ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು  ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು
Updated on

ನವದೆಹಲಿ: ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು  ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

ಈ ಕುರಿತ ಆದೇಶವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು-ಧಾರವಾಡ ದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ. 

ರೈಲಿನ ವೇಳಾಪಟ್ಟಿ ಇಂತಿದೆ: ಬೆಂಗಳೂರು-ಬೆಳಗಾವಿ ರೈಲು ಸಂಖ್ಯೆ  (20661) ಬೆಳ್ಳಿಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ.

ಹುಬ್ಬಳ್ಳಿ -ಧಾರವಾಡ ನಡುವೆ ಜೂನ್‌ 27ರಿಂದ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಂಡಿತ್ತು. ಆದರೆ ಬೆಳಗಾವಿಯವರೆಗೆ ವಿಸ್ತರಿಸುವ ಬೇಡಿಕೆಗೆ ಸ್ಪಂದನೆ ಸಿಕ್ಕಿರಲಿಲ್ಲ. ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಬೇಡಿಕೆಗೆ ಮಣಿದ ರೈಲ್ವೆ ಇಲಾಖೆ ಕೊನೆಗೂ ಬೆಳಗಾವಿಗೆ ಸಂಚಾರ ಪ್ರಾರಂಭಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com