ಶೀಘ್ರ ಬರ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಅಮಿತ್ ಶಾ, ನಿರ್ಮಲಾಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯಕ್ಕೆ ಬರ ಪರಿಹಾರದ ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಕ್ಕೆ ಬರ ಪರಿಹಾರದ ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ಮೂವರು ಸಚಿವರಿಗೆ ಬರೆದ ಪ್ರತ್ಯೇಕ ಪತ್ರದಲ್ಲಿ ಸಿದ್ದರಾಮಯ್ಯ ಅವರು ಈ ವರ್ಷ ಕಳೆದ 122 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ವರ್ಗೀಕರಿಸಿರುವುದಾಗಿ ತಿಳಿಸಿದ್ದಾರೆ.

ಮಳೆ ಕೊರತೆಯಿಂದ ರಾಜ್ಯದಲ್ಲಿ ಒಟ್ಟು 35,162.05 ಕೋಟಿ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ರಾಜ್ಯದಲ್ಲಿ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF)ಯಿಂದ 18,171.44 ಕೋಟಿ ರೂ. ಹರಿಹಾರ ಕೋರಿದೆ.

ಎರಡು ಹೆಕ್ಟೇರ್‌ಗಿಂತ ಕಡಿಮೆ ಜಮೀನು ಹೊಂದಿರುವ 52.73 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು ಅವರು ಹೆಚ್ಚಾಗಿ ಬರದ ಪರಿಣಾಮ ಎದುರಿಸುತ್ತಿದ್ದಾರೆ. ಅವರಲ್ಲಿ ಬಹುಪಾಲು ಜನರು ಕೃಷಿಯನ್ನು ಅವಲಂಬಿಸಿರುತ್ತಾರೆ ಮತ್ತು ಇನ್‌ಪುಟ್ ಸಬ್ಸಿಡಿ ಮಾತ್ರ ಅವರಿಗೆ ಲಭ್ಯವಿರುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

ಕೃಷಿ ಚಟುವಟಿಕೆಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನ ಮತ್ತು ಕುಟುಂಬಗಳ ಜೀವನ ಪೋಷಣೆಗಾಗಿ ಉಚಿತ ಪರಿಹಾರವನ್ನು ಪಾವತಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ರೂ.12577.9 ಕೋಟಿಗಳನ್ನು ಕೋರುತ್ತಿದೆ. ರಾಜ್ಯಾದ್ಯಂತ ಚಾಲ್ತಿಯಲ್ಲಿರುವ ಬರ ಪರಿಸ್ಥಿತಿಯು ಕೃಷಿಯನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸಿದೆ. ಇದು ಬೆಳೆ ವೈಫಲ್ಯ ಮತ್ತು ಗ್ರಾಮೀಣ ಕುಟುಂಬಗಳಿಗೆ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ. ಹಾಗಾಗಿ, ಬರ ಪೀಡಿತ ಕುಟುಂಬಗಳ ಮೇಲಿನ ಪರಿಣಾಮವನ್ನು ನಿವಾರಿಸಲು ಮತ್ತು ಅವರ ಜೀವನೋಪಾಯವನ್ನು ಬೆಂಬಲಿಸಲು ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ನಿಯಮಗಳ ಸಂಖ್ಯೆ 1 (ಇ) ನಲ್ಲಿ ನಿಗದಿಪಡಿಸಿದಂತೆ ಆರ್ಥಿಕ ನೆರವಿನ ಹೊರತಾದ ಪರಿಹಾರವನ್ನು (ಜಿಆರ್) ಒದಗಿಸುವ ತುರ್ತು ಅವಶ್ಯಕತೆಯಿದೆ ಎಂದು ಸಿಎಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com