ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 'ಡಿಕೆ ಸಹೋದರರನ್ನು ಕೊಲ್ಲಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ವ್ಯಕ್ತಿ; ಬಂಧನ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. 
Published on

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. 

ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌ಎಂ ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ.

ಆರೋಪಿ, 'ಡಿಕೆ ಸಹೋದರರನ್ನು ಕೊಲ್ಲಿ' ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಸುರೇಶ್ ಅವರನ್ನು ಉಲ್ಲೇಖಿಸಲು 'ಡಿಕೆ ಸಹೋದರರು' ಎಂಬ ಪದವನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಆರೋಪಿಯು ಬೆಂಗಳೂರು ನಗರ ಪೊಲೀಸರ ಬಳಿ ಸೈಬರ್ ಕ್ರೈಂ ಡಿಟೆಕ್ಟಿವ್ ಎಂದು ಹೇಳಿಕೊಂಡಿದ್ದಾನೆ.

ಆತ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಜಯನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com