ಉಡುಪಿ: ನಾಲ್ವರ ಹತ್ಯೆ ಪ್ರಕರಣ, ಆರೋಪಿ ಸ್ಥಳ ಮಹಜರು ವೇಳೆ ಸ್ಥಳೀಯರಿಂದ ಆಕ್ರೋಶ, ಬಿಗುವಿನ ವಾತಾವರಣ

ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಗುರುವಾರ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ವೇರ್ಪಟ್ಟಿತು.
ಆರೋಪಿಯಿಂದ ಸ್ಥಳ ಮಹಜರು ವೇಳೆ ಸ್ಥಳೀಯರಿಂದ ಪ್ರತಿಭಟನೆಯ ಚಿತ್ರ
ಆರೋಪಿಯಿಂದ ಸ್ಥಳ ಮಹಜರು ವೇಳೆ ಸ್ಥಳೀಯರಿಂದ ಪ್ರತಿಭಟನೆಯ ಚಿತ್ರ

ಉಡುಪಿ: ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಗುರುವಾರ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ವೇರ್ಪಟ್ಟಿತು.

ಪೊಲೀಸರು ಆರೋಪಿಯನ್ನು ಸ್ಥಳ ಮಹಜರು ನಡೆಸಲು ಅಪರಾಧ ನಡೆದ ಸ್ಥಳಕ್ಕೆ ಕರೆತರುತ್ತಿದ್ದಂತೆ ಸ್ಥಳೀಯರು ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಉದ್ರಿಕ್ತ ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಏರ್‌ಲೈನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 39 ವರ್ಷದ ಕ್ಯಾಬಿನ್ ಸಿಬ್ಬಂದಿ ಪ್ರವೀಣ್ ಅರುಣ್ ಚೌಗುಲೆ (39) ಎಂಬಾತನನ್ನು ಪೊಲೀಸರು  ಬಂಧಿಸಿದ್ದಾರೆ. ಆರೋಪಿಯನ್ನು ಇಂದು  ಕೊಲೆ ನಡೆದ ಮನೆಗೆ ಕರೆದೊಯ್ದದ್ದಾಗ ಜಮಾಯಿಸಿದ  ಸ್ಥಳೀಯರು ಆತನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದರು. ಆತನಿಗಾಗಿ ಬೆಳಗ್ಗೆಯಿಂದಲೇ ಸ್ಥಳೀಯರು ಕಾದು ಕುಳಿತಿದ್ದರು ಎಂದು ತಿಳಿದು ಬಂದಿದೆ.

ಸಂಜೆ 4.45ರ ಸುಮಾರಿಗೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಆರೋಪಿ ವಿರುದ್ಧ  ಘೋಷಣೆ  ಕೂಗುವ ಮೂಲಕ ವಾಹನ ತಡೆಯಲು ಯತ್ನಿಸಿದರು ಎಂದು ಉಡುಪಿ ಎಸ್ಪಿ ಅರುಣ್ ಕೆ ತಿಳಿಸಿದ್ದಾರೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತ್ವರಿತ ಕ್ರಮ ಕೈಗೊಳ್ಳಲಾಯಿತು. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಅಧಿಕಾರಿಗಳು ಸ್ಥಳೀಯ ಸಮುದಾಯದ ಹಿರಿಯರೊಂದಿಗೆ ಚರ್ಚೆ ನಡೆಸಿದರು. 
 
ಇದೇ ವೇಳೆ ಆರೋಪಿಯನ್ನು ಬಂಧಿಸುವಲ್ಲಿ ಕ್ಷಿಪ್ರ ಕ್ರಮ ಕೈಗೊಂಡ ಪೊಲೀಸರಿಗೆ ಕುಟುಂಬಸ್ಥರು ಧನ್ಯವಾದ ಅರ್ಪಿಸಿದ್ದಾರೆ. ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡು ಆರೋಪಿಗಳಿಗೆ ಒಂದು ವರ್ಷದೊಳಗೆ ಮರಣದಂಡನೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಅಮಾನುಷ ಹತ್ಯೆಯ ನಂತರ ಆ ಪ್ರದೇಶದ ಹಲವು ಹಿಂದೂ ಕುಟುಂಬಗಳು ದೀಪಾವಳಿ ಆಚರಿಸಲಿಲ್ಲ. ಬಂಧಿತ ವ್ಯಕ್ತಿ ತನಿಖೆಗೆ ಸಹಕರಿಸುತ್ತಿದ್ದು, ತನಿಖೆ ಮುಂದುವರಿದಂತೆ ಕೊಲೆಯ ಹಿಂದಿನ ನಿಖರ ಉದ್ದೇಶ ತಿಳಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com