8 ವಲಯಗಳಿಂದಲೂ ಸಾಥ್‌ ನೀಡಿ 'ಬೆಂಗಳೂರು ಹಬ್ಬ' ಯಶಸ್ಸುಗೊಳ್ಳುವಂತೆ ಮಾಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ 'ಬೆಂಗಳೂರು ಹಬ್ಬ'ಕ್ಕೆ ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆಯ 8 ವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
8 ವಲಯಗಳಿಂದಲೂ ಸಾಥ್‌ ನೀಡಿ 'ಬೆಂಗಳೂರು ಹಬ್ಬ' ಯಶಸ್ಸುಗೊಳ್ಳುವಂತೆ ಮಾಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು: ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ 'ಬೆಂಗಳೂರು ಹಬ್ಬ'ಕ್ಕೆ ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆಯ 8 ವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಬೆಂಗಳೂರು ಹಬ್ಬ’ ಆಚರಣೆಗೆ ಪಾಲಿಕೆ ಸಹಕಾರ ನೀಡುವ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿ, ಸರ್ಕಾರದ ಘನತೆ ಹಾಗೂ ಬೆಂಗಳೂರಿನ ಬ್ರ್ಯಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಹಬ್ಬ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರಿನ ಬ್ರಾಂಡ್‌ನಲ್ಲಿ ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಅಧಿಕಾರಿಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು,

ಹಬ್ಬಕ್ಕೆ ಜಂಕ್ಷನ್‌ಗಳು, ಫ್ಲೈಓವರ್‌ಗಳು, ಉದ್ಯಾನವನಗಳುಸ ಮಾರುಕಟ್ಟೆಗಳಂತಹ ಪ್ರಮುಖ ಸ್ಥಳಗಳನ್ನು ಗುರುತಿಸಲಾಗುತ್ತದೆ. ಪಾರಂಪರಿಕ ಕಟ್ಟಡಗಳು ಮತ್ತು ಪ್ರಮುಖ ಸರ್ಕಾರಿ ಕಚೇರಿಗಳ ಮೇಲೆ ವಿದ್ಯುತ್ ದೀಪದ ವ್ಯವಸ್ಥೆ ಮಾಡಬೇಕಿದ್ದು, ಈ ಎಲ್ಲಾ ಸ್ಥಳಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಬೆಂಗಳೂರು ಹಬ್ಬ ನಿರ್ದೇಶಕ ವಿ ರವಿಚಂದರ್ ಮಾತನಾಡಿ, ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಡಿಸೆಂಬರ್ 1 ರಿಂದ 11 ರವರೆಗೆ ‘ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ’ವನ್ನು ಆಚರಿಸಲಾಗುತ್ತಿದ್ದು, ಇದನ್ನು 12 ವಿಭಾಗಗಳಾಗಿ ವಿಂಗಡಿಸಲಾಗಿದೆ. ಉತ್ಸವಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು ಮತ್ತು ನಾಗರಿಕರು ಉತ್ಸವದ ಬಗ್ಗೆ ವಿವರಗಳನ್ನು https://habba.unboxingblr.com/ ನಲ್ಲಿ ಪಡೆಯಬಹುದು ಮತ್ತು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com