ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗು ಬಲಿ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಅಧಿಕಾರಿಗಳ ಅಮಾನತು

ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಸಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದ್ದಾರೆ.
ಮೃತ ತಾಯಿ, ಮಗು
ಮೃತ ತಾಯಿ, ಮಗು
Updated on

ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಸಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಚಿವ ಕೆ.ಜೆ.ಜಾರ್ಜ್‌ ಅವರು, ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ  AE ಮತ್ತು AEE ಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ತಾಯಿ ಹಾಗೂ ಮಗಳು, ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಬಸ್ ಇಳಿದು ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ಕರೆಂಟ್ ವೈರ್ ಕಾಣದೇ ತುಳಿದಿದ್ದಾರೆ. ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸೌಂದರ್ಯ ಅವರ ಪತಿ ವಿದ್ಯುತ್ ಸ್ಪರ್ಶದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com