ಇಂಡಿಗೋ ವಿಮಾನದಲ್ಲಿ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ!
ಬೆಂಗಳೂರು: ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ಅನೇಕ ಎಚ್ಚರಿಕೆಗಳ ಹೊರತಾಗಿಯೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನವೆಂಬರ್ 17 ರಂದು ವಿಮಾನ ಲ್ಯಾಂಡ್ ಆದ ನಂತರ 32 ವರ್ಷದ ಪ್ರಯಾಣಿಕರೊಬ್ಬರನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.
'ಇಂಡಿಗೋದಿಂದ ಬಂದ ದೂರಿನ ಆಧಾರದ ಮೇಲೆ ನಾವು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಮತ್ತು ಪ್ರಯಾಣಿಕರನ್ನು ಬಂಧಿಸಿದ್ದೇವೆ. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು' ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನ
6E 556 ವಿಮಾನದಲ್ಲಿದ್ದ ಪ್ರಯಾಣಿಕರು ಮದ್ಯದ ಅಮಲಿನಲ್ಲಿದ್ದರು ಮತ್ತು ಅನೇಕ ಎಚ್ಚರಿಕೆಗಳ ಹೊರತಾಗಿಯೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.
'ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಯಾಣಿಕರನ್ನು ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಇತರ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ' ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ