ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀಗೆ ಬಂಧನ ಭೀತಿ: 2ನೇ ಪೋಕ್ಸೋ ಕೇಸ್ ನಲ್ಲಿ ಅರೆಸ್ಟ್ ವಾರಂಟ್ ಜಾರಿ
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
Published: 20th November 2023 01:02 PM | Last Updated: 20th November 2023 01:32 PM | A+A A-

4 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಸಂದರ್ಭ
ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ.
2ನೇ ಪೋಕ್ಸೋ ಕೇಸ್ನಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿದ ಕೋರ್ಟ್, 1ನೇ ಪೋಕ್ಸೋ ಕೇಸ್ನಲ್ಲಿ ಹೈಕೋರ್ಟ್ನಿಂದ ಜಾಮೀನು ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಬಂಧನದ ಭೀತಿ ಎದುರಾಗಿದೆ.
ಇದನ್ನೂ ಓದಿ: ಪೋಕ್ಸೋ ಪ್ರಕರಣ: 13 ತಿಂಗಳ ನಂತರ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜೈಲಿನಿಂದ ರಿಲೀಸ್
ಮಠದ ಸುತ್ತ ಬಿಗಿ ಭದ್ರತೆ: ಮುರುಘಾ ಶ್ರೀಗಳಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು, ಬೆಂಬಲಿಗರು ಇರುವುದರಿಂದ ಅಹಿತಕರ ಘಟನೆ ನಡೆಯದಂತೆ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.