
ಬೆಂಗಳೂರು: ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಅತ್ಯಾಚಾರದ ಸಂತ್ರಸ್ತೆ ಈಗ ವಯಸ್ಕಳಾಗಿದ್ದು ಆರೋಪಿಯಿಂದಿಗೆ ವಿವಾಹವಾಗಲು ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಆದರೆ ಕೋರ್ಟ್ ಇಬ್ಬರ ವಿವಾಹಕ್ಕೂ ಒಂದು ತಿಂಗಳ ಗಡುವನ್ನು ಕೋರ್ಟ್ ವಿಧಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಮುಕ್ತಗೊಳಿಸಲು ಸೂಚನೆ ನೀಡಿದೆ.
ಸಂತ್ರಸ್ತೆ ಮತ್ತು ಆಕೆಯ ತಂದೆ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಎದುರು ಹಾಜರಾಗಿ ಪ್ರಮಾಣಪತ್ರ ಸಲ್ಲಿಸಿದ್ದು, ವಿಚಾರಣೆಯನ್ನು ರದ್ದುಪಡಿಸಲು ತಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ. ವಿಚಾರಣೆಯಲ್ಲಿ ಸಂತ್ರಸ್ತೆ ತನ್ನ ಪಾಟಿಸವಾಲಿನಲ್ಲಿ ಪ್ರತಿಕೂಲವಾಗಿ ವರ್ತಿಸಿದ್ದಾಳೆ ಮತ್ತು ಪ್ರಾಸಿಕ್ಯೂಷನ್ ಪ್ರಕರಣವನ್ನು ಬೆಂಬಲಿಸಲು ಪ್ರಾಸಿಕ್ಯೂಟರ್‌ನಿಂದ ಸಂತ್ರಸ್ತೆಯಿಂದ ಯಾವ ಸಾಕ್ಷ್ಯಾಧಾರಗಳನ್ನೂ ಪಡೆಯಲಾಗಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದುವರೆಸುವುದು ನ್ಯಾಯಾಂಗದ ಪ್ರಕ್ರಿಯೆಗೆ ಸೂಕ್ತವಲ್ಲ ಎಂದು ಕೋರ್ಟ್ ಹೇಳಿದೆ.
Advertisement