ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡಿರುವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರಾಗಿದ್ದಾರೆ.
ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು (ನ.22) ಮುಂಜಾನೆ 5:30 ರ ಸುಮಾರಿಗೆ ಲೈಟ್ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಅಲ್ಲದೆ, ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜು ಕೂಡ ಪುಡಿ ಪುಡಿಯಾಗಿವೆ.
ಸುದ್ದಿ ತಿಳಿಯುತ್ತದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
Advertisement