ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು: ಕೇಂದ್ರ ಸಚಿವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ

ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Updated on

ಬೆಂಗಳೂರು: ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸಿದ ಕೆಲವು ದಿನಗಳ ನಂತರ ಈ ಕ್ರಮಕ್ಕೆ ಒತ್ತಾಯಿಸಿದ್ದಾರೆ. 

"ರಾಷ್ಟ್ರದ ಭದ್ರತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡಲು ಹಲಾಲ್ ನಿಧಿಯ ಬಳಕೆಯನ್ನು ಲೆಕ್ಕಪರಿಶೋಧನೆ ಮಾಡುವಂತೆ" ಮತ್ತು ನಿಷ್ಪಕ್ಷಪಾತ ತನಿಖೆಗೆ ಆದೇಶಿಸುವಂತೆ ಯತ್ನಾಳ್ ಅವರು ಕೇಂದ್ರ ಸಚಿವ ಗೋಯಲ್ ಅವರನ್ನು ಒತ್ತಾಯಿಸಿದರು.

ಧಾರ್ಮಿಕ ಸಂಸ್ಥೆಗಳ ಸೋಗಿನಲ್ಲಿ ಹಲವಾರು ಸಂಘಟನೆಗಳು ಮಾಂಸ ಉತ್ಪಾದನೆ, ಆಹಾರ ಉತ್ಪನ್ನಗಳು, ಸೌಂದರ್ಯವರ್ಧಕಗಳು ಮತ್ತು ಇತರ ಗ್ರಾಹಕ ವಸ್ತುಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲಾಲ್ ಪ್ರಮಾಣೀಕರಣಕ್ಕೆ ಬೆಂಬಲ ನೀಡುತ್ತಿವೆ ಎಂದು ಯತ್ನಾಳ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಈ ಪ್ರಮಾಣೀಕರಣಗಳು, ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳು ಮತ್ತು ಜಾತ್ಯತೀತತೆಯ ಆದರ್ಶಗಳಿಗೆ ವಿರುದ್ಧವಾಗಿವೆ. ಹೆಚ್ಚುವರಿಯಾಗಿ, ಈ ಪ್ರಮಾಣೀಕರಣಗಳ ಮೂಲಕ ಸಂಗ್ರಹಿಸಲಾದ ಹಣವನ್ನು ದೇಶವಿರೋಧಿ ಚಟುವಟಿಕೆಗಳು, ಭಯೋತ್ಪಾದನೆ ಬೆಂಬಲ, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಕಾನೂನು ನೆರವು ಮತ್ತು ಭಯೋತ್ಪಾದನೆ ಮತ್ತು ಜಿಹಾದ್ ಗೆ ಬೆಂಬಲ ನೀಡುವ ಸಾಹಿತ್ಯವನ್ನು ಉತ್ತೇಜಿಸುವ ಕಡೆಗೆ ತಿರುಗಿಸಲಾಗುತ್ತಿದೆ ಎಂದು ಸೂಚಿಸಲು ಪುರಾವೆಗಳಿವೆ ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚೆಗೆ, ಉತ್ತರ ಪ್ರದೇಶ ಪೊಲೀಸರು ಹಲಾಲ್ ಉತ್ಪನ್ನಗಳು ಮತ್ತು ಪ್ರಮಾಣಪತ್ರಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆಸ್ಪತ್ರೆಗಳು ಮತ್ತು ಇತರ ಏಜೆನ್ಸಿಗಳು ಈಗ ಹಲಾಲ್ ಪ್ರಮಾಣೀಕರಣಗಳನ್ನು ತಮ್ಮ ಆಸ್ಪತ್ರೆಗಳಿಗೆ ಹೆಚ್ಚೆಚ್ಚು ರೋಗಿಗಳು ಬರುವಂತೆ ಮಾಡಲು ಬಂಡವಾಳ ಮಾಡುತ್ತಿವೆ. ಆಸ್ಪತ್ರೆಗಳು ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಗತ್ಯವನ್ನು ಒತ್ತಿಹೇಳಬೇಕು ಎಂದು ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com