ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೊಳೆ ಹೊನ್ನೂರು: ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು. 

ಗ್ರಾಮದ ಸುಮಾರು 76 ವರ್ಷದ ವ್ಯಕ್ತಿಯೋರ್ವ, 10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ.ನಂತರ ಮನೆಗೆ ಬಂದ ಬಾಲಕಿ ತನಗೆ ನೋವು ಆಗುತ್ತಿದೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ.

ನಂತರ ರಕ್ತಸ್ರಾವದಿಂದ ನೋವು ಹೆಚ್ಚಾಗಿದ್ದರಿಂದ  ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ತಿಳಿಸಿರುತ್ತಾಳೆ. ನಂತರ ಪೊಲೀಸರು ಠಾಣೆಗೆ ಬಂದು ದೂರು ನೀಡಿದ್ದರ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com