ಉಡುಪಿ ನಾಲ್ವರ ಹತ್ಯೆ ಪ್ರಕರಣ: ಮಾತನಾಡುವುದನ್ನು ನಿಲ್ಲಿಸಿದ್ದಕ್ಕೆ ಅಯ್ನಾಝ್ ಹತ್ಯೆ; ಪೊಲೀಸರ ಮಾಹಿತಿ

ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ

ಉಡುಪಿ: ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ಅವರು, ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಸಂಗ್ರಹಿಸಲಾಗಿದೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರ ಮಧ್ಯೆ ಗೆಳೆತನವಿತ್ತು. ಪ್ರವೀಣ್–ಅಯ್ನಾಝ್ ಗೆ ಸಾಕಷ್ಟು ಸಹಾಯ ಮಾಡಿದ್ದ. ಆಕೆಗೆ ಫ್ಲ್ಯಾಟ್'ನಿಂದ ಉದ್ಯೋಗ ಸ್ಥಳಕ್ಕೆ ಓಡಾಡುವುದಕ್ಕೆ ತನ್ನ ಸ್ಕೂಟರ್'ನ್ನು ಕೊಟ್ಟಿದ್ದ. ಆದರೆ, ಅಯ್ನಾಝ್ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಆಕೆಯನ್ನು ವಿಪರೀತ ಹಚ್ಚಿಕೊಂಡಿದ್ದ ಪ್ರವೀಣ್ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡು ಬಂದಿದ್ದ ಎಂದು ಹೇಳಿದರು.

ನೇಜಾರಿಗೆ ಬಂದ ಪ್ರವೀಣ್ ಆರಂಭದಲ್ಲಿ ಅಯ್ನಾಝ್ ಮೇಲೆ ದಾಳಿ ಮಾಡಿ, ಬಳಿಕ ಹಸೀನಾ, ಅಫ್ನಾನ್, ಆಸಿಂಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ.     ಬಳಿಕ ಬೇರೆ ಬೇರೆ ವಾಹನಗಳಲ್ಲಿ ಮಂಗಳೂರಿನಲ್ಲಿರುವ ತನ್ನ ಮನೆಗೆ ತೆರಳಿದ್ದಾನೆ. ಘಟನೆಯ ಸಂದರ್ಭದಲ್ಲಿ ಕೈ ಆಗಿದ್ದ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು, ಹೆಂಡತಿ, ಮಗುವನ್ನು ಕರೆದುಕೊಂಡು ಆಕೆಯ ತವರು ಮನೆ ಕುಡುಚಿಗೆ ಹೋಗಿದ್ದಾನೆ.

2007ರಲ್ಲಿ ಪೂನದಲ್ಲಿ ಕೆಲಕಾಲ ಪೊಲೀಸ್ ಆಗಿದ್ದ ಪ್ರವೀಣ್ ಚೌಗುಲೆ, ಉತ್ತಮ ವೇತನಕ್ಕಾಗಿ ಏರ್ ಇಂಡಿಯಾ ಉದ್ಯೋಗಕ್ಕೆ ಸೇರಿದ್ದ. ಘಟನೆಯ ಸಂದರ್ಭದಲ್ಲಿ ಅಮಲು ಪದಾರ್ಥ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿಲ್ಲ ಎಂದರು.

ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಎಲ್ಲಾ ಮಾಹಿತಿ ಮಧಾಯಮಕ್ಕೆ ಕೊಡಲು ಸಾಧ್ಯವಿಲ್ಲ. ರಾಷ್ಟ್ರಮಟ್ಟದಲ್ಲಿ ಚರ್ಚೆಯಾದ ನಾಲ್ವರ ಕೊಲೆಯ ಪ್ರಕರಣ ಇಲಾಖೆಗೆ ಬಹಳ ಸವಾಲಿನದ್ದಾಗಿತ್ತು. ಸುಮಾರು 50 ಪೊಲೀಸರು ಇದರ ಹಿಂದೆ ತಂಡವಾಗಿ ಕೆಲಸ ಮಾಡಿದ್ದಾರೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ಕೊಡುವ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆಂದು ಹೇಳಿದರು.

ಆರೋಪ ಪಟ್ಟಿ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳನ್ನು ಸಂಗ್ರಹ ಮಾಡುತ್ತಿದ್ದೇವೆ. ಕೊಲೆಯಾದ ಮನೆಯ ಯಜಮಾನಿ ಹಸೀನಾಗೆ ಕೆಲವರಿಂದ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಕುಟುಂಬದವರು ದೂರು ನೀಡಿದರೆ ತನಿಖೆ ಮಾಡಿದ್ದೇವೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com