ಇತ್ತೀಚಿಗೆ ಐಟಿ ದಾಳಿಗೆ ಒಳಗಾಗಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿಧನ

ಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಗಾಗಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಸೋಮವಾರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.
ಅಂಬಿಕಾಪತಿ
ಅಂಬಿಕಾಪತಿ

ಬೆಂಗಳೂರು: ಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಗಾಗಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಸೋಮವಾರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಐಟಿ ದಾಳಿ ವೇಳೆ ತಮ್ಮ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ನಂತರ ಅಂಬಿಕಾಪತಿ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. 

ಐಟಿ ಅಧಿಕಾರಿಗಳು ಕಳೆದ ತಿಂಗಳು ಅಂಬಿಕಾಪತಿ ಅವರ ಮನೆಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವರ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂ. ನಗದು ಪತ್ತೆಯಾಗಿತ್ತು. ಈ ಘಟನೆಯಾದ ತಿಂಗಳಲ್ಲೇ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com