ಬೆಂಗಳೂರಿನಿಂದ ಶಬರಿಮಲೆಗೆ KSRTC ವೋಲ್ವೋ ಬಸ್ ಸೇವೆ ಡಿಸೆಂಬರ್ 1 ರಿಂದ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯು ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್‌ಗೆ ಹೊಸ ವೋಲ್ವೋ ಬಸ್ ಸೇವೆಯನ್ನು ಡಿಸೆಂಬರ್ 1 ರಿಂದ ಆರಂಭಿಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯು ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್‌ಗೆ ಹೊಸ ವೋಲ್ವೋ ಬಸ್ ಸೇವೆಯನ್ನು ಡಿಸೆಂಬರ್ 1 ರಿಂದ ಆರಂಭಿಸುತ್ತಿದೆ.

ಟಿಕೆಟ್ ದರ ಪ್ರತಿ ಪ್ರಯಾಣಿಕರಿಗೆ 1,600 ರೂಪಾಯಿ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ವೋಲ್ವೋ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಹೊರಟು ಮರುದಿನ ಬೆಳಗ್ಗೆ 6.45ರ ಸುಮಾರಿಗೆ ನಿಲಕ್ಕಲ್ ತಲುಪಲಿದೆ. ನಂತರ ಸಂಜೆ 6 ಗಂಟೆಗೆ ನಿಲಕ್ಕಲ್‌ನಿಂದ ಹೊರಡಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com