ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿ ಕೆ ಶಿವಕುಮಾರ್: ಆರೋಗ್ಯ ವಿಚಾರಿಸಿದ ಡಿಸಿಎಂ

ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ನೆಲೆಸಿರುವ ನಟಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. 
ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿ ಪಶು ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ ಕೆ ಶಿವಕುಮಾರ್
ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿ ಪಶು ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ನೆಲಮಂಗಲ: ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ನೆಲೆಸಿರುವ ನಟಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. 

ಈ ಮಧ್ಯೆ ಲೀಲಾವತಿಯವರ ಕನಸಿನ ಆಸ್ಪತ್ರೆಯನ್ನು ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೀಲಾವತಿ ಅವರ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ದಿನಗಳ ಹಿಂದೆ ಶ್ರೀಮತಿ ಲೀಲಾವತಿ- ವಿನೋದ್ ರಾಜ್ ನಮ್ಮ ಮನೆಗೆ ಭೇಟಿ ನೀಡಿದ್ದರು. ಪಶು ವೈದ್ಯ ಶಾಲೆ ಕಟ್ಟಿದ್ದೀವಿ ಉದ್ಘಾಟನೆ ಮಾಡಿ ಕೊಡಿ ಎಂದಿದ್ದರು. 

ಒಂದು ದೊಡ್ಡ ಸಂದೇಶ ಇಬ್ಬರು ಕೊಟ್ಟಿದ್ದಾರೆ. ಎಷ್ಟೇ ದುಡ್ಡಿರಬಹುದು ಅವರಿಗೆ ಇರುವ ಮನಸ್ಸು ಯಾರಿಗೂ ಬರಲ್ಲ. ಅವರೇನು ಶ್ರೀಮಂತರೇನು ಅಲ್ಲ. ಆದರೆ ಸಮಾಜಕ್ಕೆ ಕೊಡುಗೆ ಕೊಡ್ಬೇಕು ಎಂದು ಎಲ್ಲರಿಗೂ ಮಾರ್ಗದರ್ಶನವಾಗಿದ್ದಾರೆ. ಬೆಂಗಳೂರಿಗೆ ಹತ್ತಿರವಾದ ಸ್ಥಳ ಇದು. ಇದು ಇಡೀ ನಮ್ಮ ಎಲ್ಲಾ ವರ್ಗದ ಜನರಿಗೆ ಮಾದರಿಯಾಗಿದೆ. ಇವರು ವ್ಯವಸಾಯದಲ್ಲೇ ಬದುಕಿದ್ದು ಇಂತಹ ಸೇವೆ ಮಾಡ್ತಿದ್ದಾರೆ. ಅವರ ಸೇವೆ 60 ವರ್ಷಗಳಿಂದ ನಡೆದು ಬರುತ್ತಿದೆ. ಇನ್ನೂ ಕಲಾವಿದರಿಗೆ ಪೆನ್ಶನ್ ಕೊಡಿ ಎಂಬ ಬೇಡಿಕೆ ವಿನೋದ್ ಕೊಟ್ಟಿದ್ದಾರೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದರು. 

ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಲೀಲಾವತಿ ಅವರನ್ನು ನೋಡಲು ಅನೇಕ ಸೆಲೆಬ್ರಿಟಿಗಳು ಇತ್ತೀಚೆಗೆ ಅವರ ನಿವಾಸಕ್ಕೆ ಆಗಮಿಸಿದ್ದರು. ದರ್ಶನ್​, ಅರ್ಜುನ್​ ಸರ್ಜಾ, ಅಭಿಷೇಕ್​ ಅಂಬರೀಷ್​ ಸೇರಿದಂತೆ ಅನೇಕರು ಬಂದು ಅವರ ಆರೋಗ್ಯ ವಿಚಾರಿಸಿದ್ದಾರೆ. ನಿನ್ನೆ ಶಿವರಾಜ್​ಕುಮಾರ್​ ಹಾಗೂ ಅವರ ಪತ್ನಿ ಗೀತಾ ಕೂಡ ಬಂದು ಹೋಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com