ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆಗೆ ಸಮಿತಿ ರಚಿಸಿದ ಬಿಬಿಎಂಪಿ

ರಾಜ್ಯ ಹೈಕೋರ್ಟ್‌ನಿಂದ ಚಾಟಿ ಬೀಸಿದ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ 301 ಹೊಸ ಶೌಚಾಲಯಗಳ ನಿರ್ಮಾಣ ಮಾಡಲು ಮುಂದಾಗಿರುವ ಬಿಬಿಎಂಪಿ, ಇದಕ್ಕಾಗಿ ಪ್ರತ್ಯೇಕ ಸಮಿತಿಯೊಂದನ್ನು ರಚನೆ ಮಾಡಿದೆ,
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಹೈಕೋರ್ಟ್‌ನಿಂದ ಚಾಟಿ ಬೀಸಿದ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ 301 ಹೊಸ ಶೌಚಾಲಯಗಳ ನಿರ್ಮಾಣ ಮಾಡಲು ಮುಂದಾಗಿರುವ ಬಿಬಿಎಂಪಿ, ಇದಕ್ಕಾಗಿ ಪ್ರತ್ಯೇಕ ಸಮಿತಿಯೊಂದನ್ನು ರಚನೆ ಮಾಡಿದೆ,

ಬೆಂಗಳೂರಿನ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ನಿರ್ಮಿಸಿರುವ ಶೌಚಾಲಯಗಳನ್ನು ಸಾರ್ವಜನಿಕರು ಉಪಯೋಗಿಸಲು ಅನುವು ಮಾಡಬೇಕು. ಈ ಸಂಬಂಧ ಕೂಡಲೆ ಆದೇಶ ಹೊರಡಿಸಲು ಅಧಿಕಾರಿಗೆ ಸೂಚನೆ ನೀಡಿದರು. ಜೊತೆಗೆ, ಹೊಸದಾಗಿ 301 ಶೌಚಾಲಯ ನಿರ್ಮಿಸಲು ಆಯಾ ವಲಯ ವ್ಯಾಪ್ತಿಯಲ್ಲಿ ಜನದಟ್ಟಣೆ ಪ್ರದೇಶ, ಮಾರುಕಟ್ಟೆಗಳು, ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ತ್ವರಿತವಾಗಿ ಸ್ಥಳಗಳನ್ನು ಗುರುತಿಸಿ ಪಟ್ಟಿ ನೀಡಲು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ನಗರದಲ್ಲಿ ಈಗಾಗಲೇ 255 ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಶೌಚಾಲಯಗಳನ್ನು ನಿರ್ಮಿಸುವ ಸ್ಥಳ ವಿಶಾಲವಾಗಿರಬೇಕಿದೆ. ಈ ಸಂಬಂಧ ವಿಶಾಲವಾದ ಸ್ಥಳಗಳನ್ನು ಗುರುತಿಸಬೇಕಿದೆ. ಜೊತೆಗೆ ನಗರದ ಕೇಂದ್ರ ಪ್ರದೇಶದಲ್ಲಿ ಹೆಚ್ಚಾಗಿ ಶೌಚಾಲಯಗಳನ್ನು ನಿರ್ಮಿಸಬೇಕು. ಈ ಪೈಕಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಅಲ್ಲದೆ ಹೊಸದಾಗಿ 46 ಶೌಚಾಲಯಗಳನ್ನು ನಿರ್ಮಾಣ ಮಾಡಲು ಕೂಡಾ ಸೂಕ್ತ ಸ್ಥಳಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ 393 ಸಾರ್ವಜನಿಕ ಶೌಚಾಲಯಗಳಿದ್ದು, ಈ ಪೈಕಿ 360 ಸಾರ್ವಜನಿಕ ಶೌಚಾಲಯ, 6 ಕಮ್ಯುನಿಟಿ ಶೌಚಾಲಯ, 17 ಮಾಡ್ಯುಲಾರ್ ಶೌಚಾಲಯ ಹಾಗೂ 10 ಪ್ರೀಕಾಸ್ಟ್ ಶೌಚಾಲಯಗಳಿವೆ. ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ವರಿತಗತಿಯಲ್ಲಿ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಬೇಕು.

ಮಹಿಳೆಯರು ಸಂಚರಿಸುವ/ಓಡಾಡುವ ಸ್ಥಳಗಳನ್ನು ಗುರುತಿಸಿ ಮಹಿಳಾ ಶೌಚಾಲಯ(She Toilets)ಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪೈಕಿ ಎಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ ಎಂಬುದನ್ನು ಗುರುತಿಸಿ ಮಹಿಳಾ ಶೌಚಾಲಯ ನಿರ್ಮಾಣ ಮಾಡಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ 229 ಇ-ಶೌಚಾಲಯಗಳಿದ್ದು, ಸದ್ಯ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಎಲ್ಲವನ್ನೂ ಸ್ಥಗಿತಗೊಳಿಸಲಾಗಿದೆ. ಇ-ಶೌಚಾಲಯಗಳನ್ನು ಸರಿಯಾಗಿ ನಿರ್ವಹಣೆ ಮಾಡುವ ಸಲುವಾಗಿ ಕೂಡಲೆ ಟೆಂಡರ್ ಕರೆದು ಸರಿಯಾಗಿ ನಿರ್ವಹಣೆ ಮಾಡಲು ಸೂಚಿಸಿದರು. ಜೊತೆಗೆ ಬಸ್ ತಂಗುದಾಣಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಸಾಧ್ಯವಾದಲ್ಲಿ ಕೆಲ ಪ್ರಮುಖ ಬಸ್ ತಂಗುದಾನಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸಬೇಕು.

“ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ನಿರ್ಮಿಸಿರುವ ಶೌಚಾಲಯಗಳನ್ನು ಸಾರ್ವಜನಿಕರು ಉಪಯೋಗಿಸಲು ಅನುವು ಮಾಡಬೇಕು. ಈ ಸಂಬಂಧ ಕೂಡಲೆ ಆದೇಶ ಹೊರಡಿಸಿ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಾಕೀತು ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com