ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳ- ಸಿಎಂ ಸಿದ್ದರಾಮಯ್ಯ

ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಮನವಿ ಬಂದಿದ್ದು, ಮುಂದಿನ ಬಜೆಟ್ ನಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ  ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು. 

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ತಿಳಿಸಿದ ಮುಖ್ಯಮಂತ್ರಿ,  ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ  ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com