ತುಮಕೂರಿನಲ್ಲಿ ಭೀಕರ ಅಪಘಾತ: ಟ್ರಕ್-ಸ್ಕೂಟರ್ ಡಿಕ್ಕಿಯಾಗಿ ತಾಯಿ-ಮಗ ಸೇರಿ ಮೂವರು ಸಾವು!

ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಸೇರಿದಂತೆ ಮೂವರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್ ಬಳಿ ಸೋಮವಾರ ಅಪಘಾತ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಸೇರಿದಂತೆ ಮೂವರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.

ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್ ಬಳಿ ಸೋಮವಾರ ಅಪಘಾತ ಸಂಭವಿಸಿದೆ.

ಮೃತರನ್ನು 40 ವರ್ಷದ ಅನಿತಾ, ಆಕೆಯ ಮಗ 18 ವರ್ಷದ ಬಾಲಾಜಿ ಮತ್ತು ಸೋದರಳಿಯ 20 ವರ್ಷದ ಪವನ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಅನಿತಾ ಮತ್ತು ಇಬ್ಬರು ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಟ್ರಕ್‌ನ ಚಕ್ರದಡಿಗೆ ವಾಹನ ಸಿಲುಕಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರು ವೇರೇನಹಳ್ಳಿ ತಾಂಡಾ ನಿವಾಸಿಗಳಾಗಿದ್ದು, ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತದೇಹಗಳನ್ನು ಕೊರಟಗೆರೆ ಪಟ್ಟಣದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com