ನವೆಂಬರ್ ನಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ?

ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ನವೆಂಬರ್ ತಿಂಗಳಿನಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ನವೆಂಬರ್ ತಿಂಗಳಿನಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ದೀಪಾವಳಿ ಹಬ್ಬದ ನಂತರ 10 ದಿನಗಳ ಕಾಲ ನಗರದಲ್ಲಿ ಚಳಿಗಾಲ ಅಧಿವೇಶನ ನಡೆಸಲು ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಯಸಲಾಗಿತ್ತು. ಆದರೆ, ಈ ಬಾರಿ ಬೆಂಗಳೂರಿನಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲು ಹಾಗೂ ಡಿಸೆಂಬರ್ ಮೂರನೇ ವಾರದಲ್ಲಿ 10 ದಿನಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಪ್ರಸ್ತಾವನೆಯನ್ನು ಸರ್ಕಾರ ಮುಂಬರುವ ಸಂಪುಟ ಸಭೆಯ ಮುಂದಿಡಲಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com