ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಬೇಡ; ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು?: ಚಲುವರಾಯಸ್ವಾಮಿ
ಬೆಂಗಳೂರು: ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಹೆಚ್ಡಿ ಕುಮಾರಸ್ವಾಮಿ ಅವರನ್ನು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳುತ್ತಾರೆ? ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು. ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.
ನಾವು ರೈತರ ಹಿತರಕ್ಷಣೆಗೆ ಬದ್ಧರಾಗಿದ್ದರು, ಆದೇಶ ಉಲ್ಲಂಘಿಸಿ ರೈತರನ್ನು ರಕ್ಷಿಸುತ್ತಿದ್ದೇವೆ, ನಮ್ಮ ಶಾಸಕರು, ಸಚಿವರು, ಸಿಎಂ,ಡಿಸಿಎಂ ಎಲ್ಲರು ರೈತರ ಹಿತ ಕಾಯಲು ಯತ್ನಿಸುತ್ತಿದ್ದೇವೆ ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ