ಬೆಂಗಳೂರಿನಲ್ಲಿ ಸುರಂಗ ಮಾರ್ಗ ಯೋಜನೆಗೆ 45 ದಿನಗಳಲ್ಲಿ ಟೆಂಡರ್: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ...
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ತಿಳಿಸಿದ್ದಾರೆ.

"ಈ ಕಂಪನಿಗಳು ಕಾರ್ಯಸಾಧ್ಯತೆಯ ವರದಿಯನ್ನು ಸಲ್ಲಿಸುತ್ತಿವೆ ಮತ್ತು ನಾವು 45 ದಿನಗಳಲ್ಲಿ ಸಾರ್ವಜನಿಕ ಟೆಂಡರ್ ಕರೆಯಲು ತಯಾರಿ ನಡೆಸುತ್ತಿದ್ದೇವೆ" ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕಾರಿಡಾರ್ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ ಎಂದರು.

ಹಲವರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ರಸ್ತೆ ಮೂಲಸೌಕರ್ಯ, ಟ್ರಾಫಿಕ್ ಜಾಮ್ ತೆರವು, ಸುರಂಗ ರಸ್ತೆ ನಿರ್ಮಾಣ ಮತ್ತು ರಸ್ತೆ ವಿಸ್ತರಣೆ ಬಗ್ಗೆಯೂ ಸಲಹೆಗಳು ಬಂದಿವೆ.

ಇನ್ನು ಸುರಂಗ ಮಾರ್ಗ ಯೋಜನೆಗೆ ಬಂಡವಾಳ ಖಾತ್ರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದೆವು. ಈ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಬಿಡ್ಡಿಂಗ್ ನಡೆದಿದ್ದರಿಂದ ಒಂಬತ್ತು ಕಂಪನಿಗಳು ಯೋಜನೆಗೆ ಆಸಕ್ತಿ ವ್ಯಕ್ತಪಡಿಸಿವೆ. ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

ಸುರಂಗ ರಸ್ತೆಯು ಚತುಷ್ಪಥವಾಗಬೇಕೋ ಅಥವಾ ಷಟ್ಪಥವಾಗಬೇಕೋ ಎಂಬ ಬಗ್ಗೆ ನಿರ್ಧಾರವಾಗಬೇಕಿದೆ. ಅದು ಎಲ್ಲಿ ಪ್ರಾರಂಭವಾಗಬೇಕು ಮತ್ತು ಎಲ್ಲಿ ಕೊನೆಗೊಳ್ಳಬೇಕ. ಮಧ್ಯದಲ್ಲಿ ಪ್ರವೇಶ ಮತ್ತು ನಿರ್ಗಮನಗಳನ್ನು ಬೆಂಗಳೂರಿನಾದ್ಯಂತ ವಿಸ್ತರಿಸಬೇಕು. ಇದನ್ನು ಒಂದು ಅಥವಾ ಎರಡು ದಿನಗಳಲ್ಲಿ ಮಾಡಲಾಗುವುದಿಲ್ಲ. ಈ ನಿಟ್ಟಿನಲ್ಲಿ ಕಂಪನಿಗಳು ಅಧ್ಯಯನ ನಡೆಸಿ ವರದಿ ಸಲ್ಲಿಸಲಿವೆ ಎಂದು ಡಿಸಿಎಂ ತಿಳಿಸಿದರು.

ಇದೊಂದು ಬೃಹತ್ ಯೋಜನೆಯಾಗಿದ್ದು, ದೊಡ್ಡ ಬಂಡವಾಳದ ಅಗತ್ಯವಿದೆ. ಇದನ್ನು ಹಂತ ಹಂತವಾಗಿ ಜಾರಿಗೊಳಿಸಬೇಕು. ಈಗ 190 ಕಿಲೋಮೀಟರ್‌ಗೆ ಪ್ರಸ್ತಾವನೆ ನೀಡಿದ್ದೇವೆ ಎಂದರು.

“ನಾವು ಬಳ್ಳಾರಿ ರಸ್ತೆ, ಒಎಂಬಿಆರ್ ರಸ್ತೆ, ಎಸ್‌ಟಿ ಮಾಲ್ ಜಂಕ್ಷನ್‌ನಿಂದ ಮೇಖ್ರಿ ವೃತ್ತ, ಮಿಲ್ಲರ್ ರಸ್ತೆ, ಚಾಲುಕ್ಯ ರಸ್ತೆ, ಟ್ರಿನಿಟಿ ವೃತ್ತ, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಕನಕಪುರ ರಸ್ತೆಯಿಂದ ಕೃಷ್ಣರಾವ್ ಪಾರ್ಕ್, ಮೈಸೂರು ರಸ್ತೆಯಿಂದ ಸಿರ್ಸಿ ವೃತ್ತ, ಮಾಗಡಿ ರಸ್ತೆ, ತುಮಕೂರು ರಸ್ತೆ, ಬೆಂಗಳೂರಿನ ಯಶವಂತಪುರ ಜಂಕ್ಷನ್, ಗೊರಗುಂಟೆಪಾಳ್ಯ, ಕೆ.ಆರ್.ಪುರಂ, ಸಿಲ್ಕ್ ಬೋರ್ಡ್ ಜಂಕ್ಷನ್ ಆಯ್ಕೆ ಮಾಡಿದ್ದೇವೆ’ ಎಂದು ಶಿವಕುಮಾರ್ ಹೇಳಿದ್ದಾರೆ.

ಈ ಪ್ರದೇಶಗಳಲ್ಲಿ ಸುರಂಗ ಮಾರ್ಗವನ್ನು ಎಲ್ಲಿ ಮಾಡಬಹುದು ಎಂಬುದನ್ನು ಕಂಪನಿಗಳು ಅಧ್ಯಯನ ಮಾಡುತ್ತವೆ. "ಸುರಂಗ ಕೊರೆಯುವ ಯಂತ್ರವು ಇಲ್ಲಿ ಚಿಕ್ಕದಾಗಿದೆ. ಮುಂಬೈ ಮತ್ತು ಉತ್ತರ ಭಾರತದಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲಾಗಿದೆ. ಬೆಂಗಳೂರಿಗೆ ಕನಿಷ್ಠ ನಾಲ್ಕು ಪಥದ ಸುರಂಗ ರಸ್ತೆಯ ಅಗತ್ಯವಿದೆ. ಯೋಜನೆಗೆ ಹೆಚ್ಚಿನ ಭೂಮಿ ಅಗತ್ಯವಿದೆ" ಎಂದು ಅವರು ಹೇಳಿದರು.

ಶಿವಕುಮಾರ್ ಈ ಯೋಜನೆಗೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಹಣ ಕೇಳಲಿದೆ. ನಮಗೆ ವರದಿ ಸಲ್ಲಿಸಿದ ನಂತರ ನಾವು ಕೇಂದ್ರ ಸರ್ಕಾರವನ್ನು ಸಂಪರ್ಕಿಸುತ್ತೇವೆ ಎಂದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮತ್ತು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಡಿಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com