ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಯೊಂದರ ಸಿಬ್ಬಂದಿ ನೀಡಿದ ಕಿರುಕುಳದಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲೆಯ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಯೊಂದರ ಸಿಬ್ಬಂದಿ ನೀಡಿದ ಕಿರುಕುಳದಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲೆಯ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತರನ್ನು 64 ವರ್ಷದ ದೇವಿರಮ್ಮ ಎಂದು ಗುರುತಿಸಲಾಗಿದ್ದು, ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಂತ್ರಸ್ತೆ ಗ್ರಾಮೀಣ ಕೂಟ ಫೈನಾನ್ಸ್ ಕಂಪನಿಯಲ್ಲಿ 78 ಸಾವಿರ ಸಾಲ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳೆ ನಾಶವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಆಕೆ ಒಂದು ತಿಂಗಳಿಂದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಕಂಪನಿಯ ಸಿಬ್ಬಂದಿ ವಾರದಿಂದ ಆಕೆಯ ಮನೆಗೆ ಬರುತ್ತಿದ್ದರು ಮತ್ತು ಸಾಲ ಮರುಪಾವತಿ ಮಾಡುವಂತೆ ಕಿರುಕುಳ ಮತ್ತು ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ.
ಈ ಚಿತ್ರಹಿಂಸೆ ತಾಳಲಾರದೆ ಮಹಿಳೆ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿಗಳಾದ ಶಂಕರ್ ನಾಯಕ್, ಉಷಾ ಮತ್ತು ರುಬೀನಾ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಅಧಿಕೃತ ಅಂಕಿ ಅಂಶಗಳ ಪ್ರಕಾರ, ಬರಗಾಲದಿಂದ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com