19 ವರ್ಷದ ಯುವತಿ ಅಪಹರಣ, ಅತ್ಯಾಚಾರ ಎಸಗಿ ಕೊಲೆ; ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ

19 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅರ್ಪಿತಾ ಅವರನ್ನು ಅಕ್ಟೋಬರ್ 3ರಂದು ಆಟೋ ಚಾಲಕ ಮತ್ತು ಹುಲ್ಲೂರು ಗ್ರಾಮದ ನಿವಾಸಿ ಅಜಯ್ ಅಪಹರಿಸಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿತ್ರದುರ್ಗ: 19 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತೆ ಅರ್ಪಿತಾರನ್ನು ಅಕ್ಟೋಬರ್ 3ರಂದು ಆಟೋ ಚಾಲಕ ಮತ್ತು ಹುಲ್ಲೂರು ಗ್ರಾಮದ ನಿವಾಸಿ ಅಜಯ್ ಅಪಹರಿಸಿದ್ದಾನೆ.

ಆಕೆಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾನೆ. ಆಕೆ ತೀವ್ರವಾಗಿ ಗಾಯಗೊಂಡಿರುವುದನ್ನು ಕಂಡ ಆರೋಪಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಅಜಯ್ ಆಕೆಯನ್ನು ಪ್ರೀತಿಸುತ್ತಿದ್ದನು. ಆದರೆ, ಆಕೆ ಇದನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಳು. ಇದರಿಂದ ಕುಪಿತಗೊಂಡ ಆತ ಸೇಡು ತೀರಿಸಿಕೊಳ್ಳಲು ನಿರ್ಧರಿಸಿ ಕೃತ್ಯವನ್ನು ಎಸಗಿದ್ದಾನೆ.

ಮಾರಣಾಂತಿಕವಾಗಿ ಗಾಯಗೊಂಡಿದ್ದ ಯುವತಿ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಂಬಂಧ ಆಕೆಯ ಪೋಷಕರು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com