
ಬೆಂಗಳೂರು: ಇಸ್ರೇಲ್ ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಭಾನುವಾರ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಾಯವಾಣಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇಸ್ರೇಲ್ ನಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರು ಕೂಡಲೇ ಹೆಲ್ಪ್‌ಲೈನ್ ಗೆ ಸಂಪರ್ಕಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್‌ನಲ್ಲಿ ನಲೆಸಿರುವ ಎಲ್ಲ ಭಾರತೀಯ ಪ್ರಜೆಗಳು ಜಾಗರೂಕರಾಗಿರುವಂತೆ ಮುಖ್ಯಮಂತ್ರಿಗಳು ಕೇಳಿಕೊಂಡಿದ್ದಾರೆ. ದೇಶದ ಜನರು ಅದರಲ್ಲೂ ಕನ್ನಡಿಗರು ಸಹ ಸ್ಥಳೀಯ ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ಪ್ ಲೈನ್ ನಂಬರ್ಸ್ ಹೀಗಿದೆ. 08022340676, 08022253707, 97235226748.
Advertisement