ರಾಜಶೇಖರಾನಂದ ಸ್ವಾಮೀಜಿ
ರಾಜಶೇಖರಾನಂದ ಸ್ವಾಮೀಜಿ

ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮತ್ತೊಬ್ಬ ಸ್ವಾಮೀಜಿಗೆ ನೋಟಿಸ್

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಜಿಗೆ ವಿಚಾರಣೆಗೆ...

ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಹಾಗೂ ಅಭಿನವ ಹಲಶ್ರೀ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೈಗಾರಿಕೋದ್ಯಮಿ ಹಾಗೂ ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಆರೋಪಿಗಳು 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆ.

ಇದೀಗ ಹಿಂದುತ್ವವಾದಿ, ಟಿವಿ ಕಾರ್ಯಕ್ರಮಗಳಲ್ಲಿ ನಿಯಮಿತವಾಗಿ ಕಾಣಿಸಿಕೊಳ್ಳುತ್ತಿದ್ದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ.

ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲೇ ವಿಚಾರಣೆಗೆ ತೆರಳುವ ಸಾಧ್ಯತೆಯಿದೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಚೈತ್ರಾ ವಜ್ರದೇಹಿ ಸ್ವಾಮೀಜಿಯ ಹೆಸರು ಪ್ರಸ್ತಾಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com