ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು ಶಾಲಾ ಅವಧಿಯಲ್ಲಿ ಬದಲಾವಣೆ ಪ್ರಸ್ತಾಪ: 'ಪರ್ಯಾಯ ಮಾರ್ಗ' ಹುಡುಕಲು ಸಲಹೆ!

ನಗರದ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಶಾಲೆಯ ಸಮಯವನ್ನು ಬದಲಾವಣೆ ಮಾಡಲು ಸರ್ಕಾರ ಮುಂದಾಗಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಈ ನಡೆಯನ್ನು ಶಾಲಾ ವ್ಯವಸ್ಥಾಪಕ ಮಂಡಳಿ, ಪೋಷಕರು, ಶಿಕ್ಷಕರು, ಸಂಚಾರಿ ಪೊಲೀಸರು ಮತ್ತು ಖಾಸಗಿ ಸಾರಿಗೆ ಸಂಸ್ಥೆಯವರು ಒಕ್ಕೊರಲಿನಿಂದ ವಿರೋಧಿಸುತ್ತಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಶಾಲೆಯ ಸಮಯವನ್ನು ಬದಲಾವಣೆ ಮಾಡಲು ಸರ್ಕಾರ ಮುಂದಾಗಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಈ ನಡೆಯನ್ನು ಶಾಲಾ ವ್ಯವಸ್ಥಾಪಕ ಮಂಡಳಿ, ಪೋಷಕರು, ಶಿಕ್ಷಕರು, ಸಂಚಾರಿ ಪೊಲೀಸರು ಮತ್ತು ಖಾಸಗಿ ಸಾರಿಗೆ ಸಂಸ್ಥೆಯವರು ಒಕ್ಕೊರಲಿನಿಂದ ವಿರೋಧಿಸುತ್ತಿದ್ದಾರೆ. 

ಶಾಲಾ ಸಮಯದಲ್ಲಿ ಸಂಭವನೀಯ ಬದಲಾವಣೆಯ ಕುರಿತು ಚರ್ಚೆ ನಡೆಸಲು ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಈ ರೀತಿಯ ನಿರ್ಧಾರ ಬಂದಿದೆ.

ಶಾಲಾ ಸಮಯವನ್ನು ಬದಲಾಯಿಸುವುದರಿಂದ ನಗರದಲ್ಲಿ ದೈಹಿಕ ಚಟುವಟಿಕೆಯಿಲ್ಲದ ಮಕ್ಕಳ ಆರೋಗ್ಯಕ್ಕೆ ಹಾನಿಯಾಗುತ್ತದೆ. ಪೋಷಕರಿಗೆ ವಿಶೇಷವಾಗಿ ಉದ್ಯೋಗದಲ್ಲಿರುವವರಿಗೆ ದೊಡ್ಡ ತೊಂದರೆಯಾಗುತ್ತದೆ ಎಂದು ಸಂಬಂಧಪಟ್ಟವರು ಹೇಳುತ್ತಾರೆ. ಶಾಲೆಗಳನ್ನು ಬೇಗ ಆರಂಭಿಸಿದರೆ ಪೋಷಕರು ಬೇಗನೆ ಬೆಳಗ್ಗೆ ಸಿದ್ಧವಾಗಬೇಕಾಗುತ್ತದೆ. ಮಧ್ಯಾಹ್ನ ಬಿಸಿಯೂಟ ತಯಾರಿಸುವವರು ಬೆಳ್ಳಂಬೆಳಗ್ಗೆ 4:30ಕ್ಕೆ ಕೆಲಸ ಆರಂಭಿಸಬೇಕು. ಇದರಿಂದ ಪೋಷಕರು, ಶಿಕ್ಷಕರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಸಂಬಂಧಪಟ್ಟವರು ಹೇಳುತ್ತಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಪ್ರಸ್ತುತ ಶಾಲಾ ಸಮಯದ ಬದಲಾವಣೆಯನ್ನು ವಿರೋಧಿಸುವ ಕಾರಣಗಳನ್ನು ಸಂಬಂಧಪಟ್ಟವರು ಪಟ್ಟಿ ಮಾಡಿದ್ದಾರೆ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ನಾವು ವಿಶ್ಲೇಷಿಸಬೇಕಾದ ಕೆಲವು ಮೂಲಭೂತ ವಾಸ್ತವಗಳಿವೆ, ಅದನ್ನು ನ್ಯಾಯಾಲಯದಲ್ಲಿ ಮಂಡಿಸಲಾಗುವುದು. ಬೆಂಗಳೂರು ನಗರ ಪೊಲೀಸರು ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (CBD) ಸೇರಿದಂತೆ ಎಂಟು ಹಾಟ್‌ಸ್ಪಾಟ್‌ಗಳನ್ನು ಗುರುತಿಸಿದ್ದಾರೆ. ಹೊರ ವರ್ತುಲ ರಸ್ತೆ (ORR) ಬಳಿಯ ಕೆಲವು ಸ್ಥಳಗಳನ್ನು ಟ್ರಾಫಿಕ್ ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ನಗರದಲ್ಲಿ ಸಂಚಾರ ದಟ್ಟಣೆಗೆ ಶಾಲೆಗಳೇ ಮುಖ್ಯ ಕಾರಣವಲ್ಲ, ಟ್ರಾಫಿಕ್ ಜಾಮ್‌ಗೆ ಸರ್ಕಾರ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಹಲವು ಸಂಘ ಸಂಸ್ಥೆಗಳು ಧ್ವನಿಗೂಡಿಸಿವೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳ ಸಂಘದ (ಕೆಎಎಂಎಸ್) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಡಿ, ಕೇಂದ್ರ ವಾಣಿಜ್ಯ ಜಿಲ್ಲೆಗಳ ಪ್ರದೇಶದಲ್ಲಿ ತಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವ ಪೋಷಕರು ತಮ್ಮ ವೈಯಕ್ತಿಕ ವಾಹನಗಳ ಬದಲಿಗೆ ಸಾರ್ವಜನಿಕ ಅಥವಾ ಶಾಲಾ ಸಾರಿಗೆಯನ್ನು ಮಾತ್ರ ಬಳಸುವಂತೆ ಒಪ್ಪಂದಕ್ಕೆ ಸಹಿ ಹಾಕಬೇಕು. ಶಾಲಾ ಸಮಯದಲ್ಲಿ ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುವುದರಿಂದ ಮುಂಜಾನೆ ನಗರಕ್ಕೆ ಪ್ರವೇಶಿಸುವ ವಾಹನಗಳ ಬಗ್ಗೆ ಸರ್ಕಾರ ಪರಿಗಣಿಸಬೇಕು ಎಂದು ಹೇಳಿದರು.

ಇತರ ಸಲಹೆಗಳಲ್ಲಿ ಸಂಪನ್ಮೂಲಗಳನ್ನು ಕ್ರೋಢೀಕರಿಸುವುದು ಮತ್ತು ಖಾಸಗಿ ಬಸ್ಸುಗಳು ಓಡದ ಶಾಲೆಗಳಿಗೆ ಬಿಎಂಟಿಸಿ ಬಸ್ಸುಗಳನ್ನು ಒದಗಿಸುವುದು ಸೇರಿದೆ. ಅದೇ ರಸ್ತೆಯಲ್ಲಿ ಶಾಲೆಗಳು ಇರುವ ಪ್ರದೇಶದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಖಾಸಗಿ ಸಾರಿಗೆ ಪ್ರತಿ ವಿದ್ಯಾರ್ಥಿಗೆ ವಾರ್ಷಿಕವಾಗಿ 25,000-30,000 ವರೆಗೆ ವೆಚ್ಚವಾಗುವುದರಿಂದ ಈ ಉಪಕ್ರಮವು ಆರ್ಥಿಕವಾಗಿ ನಮಗೆ ಅನುಕೂಲ ಮಾಡಿಕೊಡುತ್ತದೆ ಎಂದು ಪೋಷಕರು ಹೇಳುತ್ತಾರೆ. 

ಶಾಲಾ-ಕಾಲೇಜುಗಳಿಗೆ ತೆರಳುವ ಹಲವು ರಸ್ತೆಗಳು ಹದಗೆಟ್ಟಿದ್ದು, ವಾಹನಗಳ ವೇಗ ಕಡಿಮೆ ಆಗುತ್ತಿದ್ದು, ಅದರತ್ತ ಗಮನಹರಿಸಬೇಕೆಂದು ಸಂಬಂಧಪಟ್ಟವರು ಹೇಳುತ್ತಾರೆ. 

"ಅವಶ್ಯಕತೆಗಳ ಆಧಾರದ ಮೇಲೆ ನಿರ್ದಿಷ್ಟ ಹೆಚ್ಚಿನ ಸಾಂದ್ರತೆಯ ಪ್ರದೇಶಗಳಲ್ಲಿ ಟ್ರಾಫಿಕ್ ವಾರ್ಡನ್ ನ್ನು ಬೆಳಗ್ಗೆ ಮತ್ತು ಮಧ್ಯಾಹ್ನ ವಾಹನಗಳ ಸುಲಭ ಸಂಚಾರಕ್ಕೆ ಅನುಕೂಲವಾಗುವಂತೆ ನಿಯೋಜಿಸಬೇಕು ಎಂದು ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಬಿಎನ್ ಯೋಗಾನಂದ ಹೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com