ರಾಜ್ಯ ಶಿಕ್ಷಣ ನೀತಿ: ಪ್ರೊ. ಸುಖದೇವ್ ತೋರಟ್‌ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ ಇಪಿ) ಅನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಎನ್ ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. ಸುಖದೇವ್ ತೋರಟ್‌ ಅಧ್ಯಕ್ಷತೆಯಲ್ಲಿ...
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ ಇಪಿ) ಅನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಎನ್ ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. ಸುಖದೇವ್ ತೋರಟ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಬುಧವಾರ ಆದೇಶ ಹೊರಡಿಸಿದೆ.

ಪ್ರೊ. ಸುಖ್‌ದೇವ್ ಥೋರಟ್ ಅವರ ನೇತೃತ್ವದಲ್ಲಿ 15 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ಎಂಟು ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಪ್ರಕಟಿಸಿದೆ.

2024ರ ಫೆಬ್ರವರಿ 28ರೊಳಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡುವಂತೆ ಈ ಸಮಿತಿಗೆ ನಿರ್ದೇಶನ ನೀಡಲಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಿ ಆದೇಶಿಸಲಾಗಿದೆ.

ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com