ರಾಜ್ಯದಲ್ಲಿ ಒಟ್ಟು 216 'ಬರಪೀಡಿತ ತಾಲೂಕು'ಗಳೆಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ

2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು.

ಈ ಫೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ನೀಡಿರುವ ವರದಿಯನ್ವಯ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ನಿರ್ಧರಿಸಲಾಗಿದೆ. 

ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ  2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com