ದಸರಾ ಆಹಾರ ಮೇಳಕ್ಕೆ ಚಾಲನೆ: ತಿನ್ನುವ ಹಕ್ಕು ನಮಗಿದೆ, ಬಿಸಾಡುವ ಹಕ್ಕು ಇಲ್ಲ- ಕೆ ಹೆಚ್ ಮುನಿಯಪ್ಪ

ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ತಿನ್ನುವ ಹಕ್ಕು ನಮಗಿದೆ ಆದರೆ ಬಿಸಾಡುವ ಹಕ್ಕು ನಮಗಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ  ಕೆ ಹೆಚ್ ಮುನಿಯಪ್ಪ  ತಿಳಿಸಿದರು.
ಆಹಾರ ಮೇಳಕ್ಕೆ ಚಾಲನೆ ನೀಡಿದ ಸಚಿವ ಕೆಹೆಚ್ ಮುನಿಯಪ್ಪ
ಆಹಾರ ಮೇಳಕ್ಕೆ ಚಾಲನೆ ನೀಡಿದ ಸಚಿವ ಕೆಹೆಚ್ ಮುನಿಯಪ್ಪ

ಮೈಸೂರು : ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ತಿನ್ನುವ ಹಕ್ಕು ನಮಗಿದೆ ಆದರೆ ಬಿಸಾಡುವ ಹಕ್ಕು ನಮಗಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ  ಕೆ ಹೆಚ್ ಮುನಿಯಪ್ಪ  ತಿಳಿಸಿದರು.

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ನಗರದ ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಯೋಜಿಸಿರುವ ದಸರಾ ಆಹಾರ ಮೇಳ ಕಾರ್ಯಕ್ರಮವನ್ನು ಹಾಲು ಉಕ್ಕಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಇಂದು ಆಹಾರ ಮೇಳದಲ್ಲಿ 150 ಮಳಿಗೆಗಳನ್ನು ತೆರೆಯಲಾಗಿದೆ. ಆಹಾರವನ್ನು ಯಾರು ಕೂಡ ವ್ಯರ್ಥ ಮಾಡಬಾರದು. ಉಪಯುಕ್ತರು ಆಹಾರವನ್ನು ಬಳಸಿಕೊಳ್ಳಿ ಹೆಚ್ಚಿನ ರೀತಿ ಆಹಾರ ಪೋಲಾಗುವುದನ್ನು ತಪ್ಪಿಸಿ ಎಂದರು.

ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿರುವುದು ಕಂಡುಬಂದಿದೆ. ಮದುವೆ ಮನೆಗಳು ಮತ್ತು ಶುಭ ಸಮಾರಂಭಗಳಲ್ಲಿ ಹಾಗೂ ಕೆಲವು ಹೋಟೆಲ್ ಗಳಲ್ಲಿ ಆಹಾರ ವ್ಯರ್ಥವಾಗುತ್ತಿದೆ. ಈ ರೀತಿ ಆಹಾರವನ್ನು ವ್ಯರ್ಥ ಮಾಡಬಾರದು.

ಮುಂದಿನ ದಿನಗಳಲ್ಲಿ ಆಹಾರ ವ್ಯರ್ಥವಾಗದಂತೆ ಸರ್ಕಾರದಿಂದ ನಿಯಮಾವಳಿಗಳನ್ನು ರೂಪಿಸಿ ಆಹಾರ ವ್ಯರ್ಥ್ಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಿಧಾನಸಭಾ ಪರಿಷತ್ ಸದಸ್ಯ ಡಿ ತಿಮ್ಮಯ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com