ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾದಬ್ರಹ್ಮ ಹಂಸಲೇಖ ಅವರಿಂದ ಅದ್ಧೂರಿ ಚಾಲನೆ

ವಿಶ್ವವಿಖ್ಯಾತ 414ನೇ ಮೈಸೂರು ದಸರಾ  ಮಹೋತ್ಸವಕ್ಕೆ ಭಾನುವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಬೆಳಗ್ಗೆ 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಸಂಗೀತ ನಿರ್ದೇಶಕ ಹಂಸಲೇಖ  ಚಾಲನೆ ನೀಡಿದ್ದಾರೆ.
ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ
ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ
Updated on

ಮೈಸೂರು: ವಿಶ್ವವಿಖ್ಯಾತ 414ನೇ ಮೈಸೂರು ದಸರಾ  ಮಹೋತ್ಸವಕ್ಕೆ ಭಾನುವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಬೆಳಗ್ಗೆ 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಸಂಗೀತ ನಿರ್ದೇಶಕ ಹಂಸಲೇಖ  ಚಾಲನೆ ನೀಡಿದ್ದಾರೆ.

ಇದಕ್ಕೂ ಮೊದಲು ಹಂಸಲೇಖ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಹಲವಾರು ಗಣ್ಯರು ಅಲಂಕೃತ ಬೆಳ್ಳಿ ರಥದಲ್ಲಿ ಆಸೀನಳಾಗಿದ್ದ ಪಂಚಲೋಹದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಬಳಿಕ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಗೆ ಚಾಲನೆ ನೀಡಿದರು. ಈ ವೇಳೆ ನಾಡಗೀತೆಯನ್ನು ಹಾಡಿ ಗೌರವ ಸಲ್ಲಿಸಲಾಯಿತು. ಸಚಿವರಾದ ಕೆ. ವೆಂಕಟೇಶ್ ,ಕೆ. ಜೆ. ಜಾರ್ಜ್, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಶಿವಕುಮಾರ್, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಇತರ ಗಣ್ಯರು ಭಾಗಿಯಾಗಿದ್ದರು. ಉದ್ಘಾಟನಾ ಕಾರ್ಯಕ್ರಮಕ್ಕೂ ಮೊದಲು ಚಾಮುಂಡಿ ಪೂಜೆ, ಕಂಕಣಧಾರಣೆ ಸೇರಿ ಹಲವು ವಿಧಿವಿಧಾನಗಳು ನಡೆದವು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹಂಸಲೇಖ, ಪೂಜ್ಯ ಕನ್ನಡಕ್ಕೆ, ಪೂಜ್ಯ ಕನ್ನಡಿಗರಿಗೆ ನನ್ನ ನಮನ. ಈ ಅವಕಾಶಕ್ಕಾಗಿ ನಾನು ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದರು. ಯಾರು ಯಾರನ್ನು ನೆನೆಯಾನಾ ? ಯಾರು ಯಾರನ್ನು ನೆನೆಯಲಿ, ಕನ್ನಡ ದೀಪ, ಸಮೃದ್ದಿ ಅಭಿವೃದ್ಧಿ ಶಾಂತಿ ಸಮೃದ್ದಿಯ ನನ್ನ ಮಾತಿನ ಪರಿವಿಧಿ. ಪೂಜ್ಯ ಕನ್ನಡಿಗರಿಗೆ ಪೂಜ್ಯ ಕನ್ನಡಕ್ಕೆ ಈ ದೇವಾಲಯ ಪ್ರೇಮಾಲಯಕ್ಕೆ ಸಾವಿರದ ಶರಣುಗಳು ಎಂದು ಹೇಳಿದರು.

ಕರ್ನಾಟಕದ ಏಕೀಕರಣಕ್ಕೆ ಈಗ ಐದಶ ಅಂದರೆ ಐವತ್ತು. ಏಕೀಕರಣಕ್ಕೆ ಐವತ್ತು ತುಂಬಿದೆ ಕರ್ನಾಟಕ ಐದಶ ಎಂದು ಕರೆಯೋಣ.  ಐದಶ ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ ಇದು ಬಹಳ ಬೆಲೆ ಬಾಳುವಂತಹದ್ದು. ಈ ಅವಕಾಶ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹಾಗೂ ಸಾವಿರಾರು ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದರು.

ಈ ಅವಕಾಶಕ್ಕೆ ಯಾರು ಕಾರಣ ಯಾರನ್ನು ಮೊದಲು ನೆನೆಯಲಿ. ಅಪ್ಪ ಗೋವಿಂದರಾಜ ಮಾನೆ ಅಮ್ಮ ರಾಜಮ್ಮ ಗುರು ನೀಲಕಂಠ ಅಥವಾ ನಾದ ನಾಟಕರಂಗ ಸರ್ಕಾರ ಅಥವಾ ಸಂವಿಧಾನವನ್ನೇ, ಸಂವಿಧಾನದ ದನಿ ಸಿದ್ದರಾಮಯ್ಯ ಅವರನ್ನೇ ?ಪ್ರಬಲ  ಸಂಘಟಕ ಡಿಸಿಎಂ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ ಎಚ್ ಸಿ ಮಹದೇವಪ್ಪ ಅವರನ್ನೇ, ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ ? ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತಾ ಹೇಳಲಿ ಎಂದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಅ.24ರವರೆಗೂ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕೈಗೊಳ್ಳಲಾಗಿದೆ. ದಸರಾ ಕಾರ್ಯಕ್ರಮಗಳು ನಡೆಯಲಿರುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮೈಸೂರು ನಗರ ಸೇರಿದಂತೆ ಇತರೆ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಓರ್ವ ಡಿಐಜಿ, 11 ಎಸ್ಪಿ, 410 ಪೊಲೀಸ್ ಅಧಿಕಾರಿಗಳು, 3778 ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 4200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಶಸ್ತ್ರ ಪಡೆಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಗರುಡ ಪಡೆ ಸಹ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com