ಚಿಕ್ಕಮಗಳೂರು: ತಾಯಿಯೊಂದಿಗೆ ಅಂಗಡಿಗೆ ಬಂದಿದ್ದ ಬಾಲಕಿಯೊಂದಿಗೆ ಅನುಚಿತ ವರ್ತನೆ, ಆಭರಣ ವ್ಯಾಪಾರಿಗೆ ಥಳಿತ

ತನ್ನ ತಾಯಿಯೊಂದಿಗೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಚಿಕ್ಕಮಗಳೂರು: ತನ್ನ ತಾಯಿಯೊಂದಿಗೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಪೊಲೀಸರ ಪ್ರಕಾರ, ಶುಕ್ರವಾರ ತರೀಕೆರೆ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಆರೋಪಿ ಅಮೀರ್ ಮಾಲೀಕತ್ವದ ಆಭರಣ ಮಳಿಗೆಗೆ ತಾಯಿ-ಮಗಳು ತೆರಳಿದ್ದರು.

ಮಾತನಾಡುವ ನೆಪದಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು.

ಘಟನೆಯ ಬಗ್ಗೆ ಬಾಲಕಿ ತನ್ನ ತಾಯಿಗೆ ದೂರು ನೀಡಿದಾಗ, ಮಹಿಳೆ ಕೋಪಗೊಂಡು ಅಮೀರನಿಗೆ ತಮ್ಮ ಪಾದರಕ್ಷೆಗಳಿಂದ ಹೊಡೆದಿದ್ದಾರೆ.

ಸಾರ್ವಜನಿಕರು ಕೂಡ ಆಕೆಯೊಂದಿಗೆ ಸೇರಿಕೊಂಡು ಆರೋಪಿಗೆ ಥಳಿಸಿದ್ದಾರೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಹಿಂದೆಯು ಆರೋಪಿ ತನ್ನ ಅಂಗಡಿಗೆ ಬಂದ ಮಹಿಳೆಯರು ಮತ್ತು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದನು ಎಂದು ತಿಳಿದುಬಂದಿದೆ.

ಈ ಸಂಬಂಧ ತರೀಕೆರೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com