ಬಾಕಿ ಬಿಲ್‌ಗಳ ಪಾವತಿಗೆ ಒತ್ತಾಯಿಸಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ನಿಯೋಗ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಮಂಗಳವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. 
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಮಂಗಳವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಬಿಲ್‌ 5,000 ಕೋಟಿ ರೂ. ಆಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ಬಾಕಿ ಇರುವ ಬಿಲ್‌ಗಳನ್ನು ಶೀಘ್ರವೇ ಮಂಜೂರು ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ತಮ್ಮ ದೂರನ್ನು ಪುನರುಚ್ಚರಿಸಿದ್ದೇನೆ. ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡುವಾಗ ಅವ್ಯವಹಾರ ನಡೆದಿದೆ ಎಂದು ನಾವು ಹೇಳಿದ್ದೇವೆ ಎಂದು ಅವರು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕೆಎಸ್‌ಸಿಎ ಮಾಡಿರುವ ಶೇ 40ರಷ್ಟು ಕಮಿಷನ್‌ ಆರೋಪ ಈಗಿನ ಕಾಂಗ್ರೆಸ್‌ ಆಡಳಿತದಲ್ಲೂ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕೆಂಪಣ್ಣ, 'ಈ ಸರ್ಕಾರ ಇನ್ನೂ ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದ ಕಾರಣ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ' ಎಂದರು.

ಕೆಂಪಣ್ಣ ನೇತೃತ್ವದ ಕೆಎಸ್‌ಸಿಎ ನಿಯೋಗ ಕಳೆದ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು.
ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕೆಂಪಣ್ಣ, ಕಳೆದ ಐದೂವರೆ ತಿಂಗಳಿಂದ ಬಾಕಿಯಿರುವ ಗುತ್ತಿಗೆದಾರರ ಬಿಲ್‌ಗಳನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ರಾಜ್ಯದ ಹಣಕಾಸಿನ ಸ್ಥಿತಿ ಸರಿಯಿರದ ಕಾರಣ ಬಾಕಿ ಬಿಲ್ ಬಿಡುಗಡೆ ಮಾಡುವುದು ತಡವಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com