ಮಂಗಳೂರಿನಲ್ಲಿ ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಕಾರು, ಯುವತಿ ಸಾವು 4 ಮಂದಿಗೆ ಗಾಯ

ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, 4ಮಂದಿ ಗಾಯಗೊಂಡಿದ್ದಾರೆ.
ಮಂಗಳೂರಿನಲ್ಲಿ ಭೀಕರ ಅಪಘಾತ
ಮಂಗಳೂರಿನಲ್ಲಿ ಭೀಕರ ಅಪಘಾತ

ಮಂಗಳೂರು: ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, 4ಮಂದಿ ಗಾಯಗೊಂಡಿದ್ದಾರೆ.

ಮಂಗಳೂರು ಲೇಡಿಹಿಲ್‌ ನಲ್ಲಿ ಈ ಅಪಘಾತ ಸಂಭವಿಸಿದ್ದು, ಕುದ್ರೋಳಿ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದವರ ಕಾರು ಪಾದಾಚಾರಿಗಳ ಮೇಲೆ ಹರಿದಿದ್ದು ಸ್ಥಳದಲ್ಲಿಯೇ ಓರ್ವ ಯುವತಿ ಮೃತಪಟ್ಟಿದ್ದಾಳೆ. ಅಂತೆಯೇ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 4 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಐವರು ಯುವತಿಯರು ಮಣ್ಣಗುಡ್ಡ ಮಹಾನಗರ ಪಾಲಿಕೆ ಸ್ವಿಮಿಂಗ್‌ ಪೂಲ್‌ ಬಳಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹುಂಡೈ ಇಯೋನ್‌ ಕಾರು ವೇಗವಾಗಿ ಬಂದು ಪಾದಾಚಾರಿ ಮಾರ್ಗದ ಮೇಲೆ ಹರಿದಿದೆ. ಈ ವೇಳೆ ಓರ್ವ ಯುವತಿ ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಕಾರಿನ ಸಮೇತ ಆರೋಪಿ ಪರಾರಿಯಾಗಿದ್ದ. ಆರೋಪಿಯನ್ನು ಮಣ್ಣಗುಡ್ಡದ ಕಮ್ಲೇಶ್‌ ಬಲ್‌ ದೇವ್‌ ಎಂದು ಗುರುತಿಸಲಾಗಿದೆ. ಪರಾರಿಯಾಗಿದ್ದ ಆರೋಪಿ ನಂತರ ಆತ ಕಾರನ್ನು ಹೊಂಡ ಶೋರೂಂ ಎದುರು ಪಾರ್ಕ್‌ ಮಾಡಿ ಮನೆಗೆ ತೆರಳಿದ್ದಾನೆ. ಬಳಿಕ ಟ್ರಾಫಿಕ್‌ ಠಾಣೆಗೆ ತಂದೆ ಬಲದೇವ್‌ ಅವರೊಂದಿಗೆ ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತಪಟ್ಟ ಯುವತಿ ಸುರತ್ಕಲ್‌ ಕಾನ ನಿವಾಸಿ ರೂಪಶ್ರೀ (23) ಎಂದು ತಿಳಿದುಬಂದಿದ್ದು, ಗಾಯಗೊಂಡವರನ್ನು ಸ್ವಾತಿ( 26) ಹಿತನ್ವಿ(16) ಕೃತಿಕಾ( 16) ಯತಿಕಾ (12) ಎಂದು ಗುರುತಿಸಲಾಗಿದೆ.

ಹೇಗಾಯ್ತು ಅಪಘಾತ
ಈ ಘಟನೆಯ ನಡೆದ ವೇಳೆ ಸೆಕ್ಯೂರಿಟಿ ಗಾರ್ಡ್‌ ಒಬ್ಬರು ಕಟ್ಟಡದ ಮುಂಭಾಗದಲ್ಲಿ ನಿಂತಿದ್ದು, ಇದೇ ಸಮಯದಲ್ಲಿ ಮೂರ್ನಾಲ್ಕು ಯುವತಿಯರಿದ್ದ ಗುಂಪೊಂದು ಈ ಕಟ್ಟಡಕ್ಕೆ ಹೊಂದಿಕೊಂಡಿರುವ ಪಾದಚಾರಿ ಮಾರ್ಗದಲ್ಲಿ ತಮ್ಮಷ್ಟಕ್ಕೆ ನಡೆದುಕೊಂಡು ಬರುತ್ತಿದ್ದರು. ಶರವೇಗದಲ್ಲಿ ಬಂದ ಕಾರು ಯವತಿಯರ ಗುಂಪಿನ ಮೇಲೆ ಹರಿದಿದ್ದು, ಯುವತಿಯರನ್ನು ತಳ್ಳಿಕೊಂಡು ಮುಂದೆ ಸಾಗಿದೆ. ಮುಂದುವರಿದು ಕಂಬವೊಂದಕ್ಕೆ ಬಡಿದು ಪುನಃ ರಸ್ತೆಯಲ್ಲಿ ಸಾಗುತ್ತಿರುವುದು ದೃಶ್ಯದಲ್ಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com