
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬಹಳ ಸಮಯಗಳಿಂದ ಮಂಡಿನೋವಿನ ಬಾಧೆ ಕಾಡುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಅವರ ಆರೋಗ್ಯ ಯೋಗಕ್ಷೇಮ ವಿಚಾರಿಸಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಬೊಮ್ಮಾಯಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಅವರ ರಾಜಕೀಯ ಕಾರ್ಯದರ್ಶಿಗಳು ಇದ್ದರು.
ಕಳೆದ ತಿಂಗಳು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾಗಲೂ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಮಾತಾಡಿಸಿದ್ದರು. ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಕೂಗಾಡಿ ಅಧಿಕ ರಕ್ತದೊತ್ತಡಕ್ಕೊಳಗಾಗಿ ಆಸ್ಪತ್ರೆ ಸೇರಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಹ ಸಿದ್ದರಾಮಯ್ಯ ಹೋಗಿ ಮಾತನಾಡಿಸಿದ್ದರು.
Advertisement