ಉತ್ತರ ಕನ್ನಡ: ಇನ್‌ಸ್ಟಾಗ್ರಾಮ್ ಸ್ನೇಹಿತನ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿ ಆತ್ಮಹತ್ಯೆ

ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್‌ ಮೂಲಕ ಸ್ನೇಹ ಬೆಳೆಸಿದ ವ್ಯಕ್ತಿಯಿಂದ ಕಿರುಕುಳಕ್ಕೆ ಬೇಸತ್ತು ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉತ್ತರ ಕನ್ನಡ: ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್‌ ಮೂಲಕ ಸ್ನೇಹ ಬೆಳೆಸಿದ ವ್ಯಕ್ತಿಯಿಂದ ಕಿರುಕುಳಕ್ಕೆ ಬೇಸತ್ತು ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣ ಸಮೀಪದ ಹಾಡವಳ್ಳಿ ಗ್ರಾಮದ ನಿವಾಸಿ 24 ವರ್ಷದ ನೇತ್ರಾ ಗೋವಾಲಿ ಎಂದು ಗುರುತಿಸಲಾಗಿದೆ.

ಯುವತಿಯ ತಂದೆ ಆಕೆಯ ಇನ್‌ಸ್ಟಾಗ್ರಾಮ್ ಸ್ನೇಹಿತ ಗೋವರ್ಧನ ಮೊಗೇರ ವಿರುದ್ಧ ದೂರು ದಾಖಲಿಸಿದ್ದು, ಆತನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಸಂತ್ರಸ್ತೆಗೆ ಒಂದು ವರ್ಷದಿಂದ ಪರಿಚಿತನಾಗಿದ್ದನು. ಆದರೆ, ಆತ ತನ್ನನ್ನು ಪ್ರೀತಿಸುವಂತೆ ಯುವತಿಗೆ ಒತ್ತಾಯಿಸುತ್ತಿದ್ದನು. ಆಕೆ ಅದನ್ನು ನಿರಾಕರಿಸಿದಾಗ, ಆತ ಆಕೆಗೆ ಖರ್ಚು ಮಾಡಿದ ಎಲ್ಲಾ ಹಣವನ್ನು ಹಿಂದಿರುಗಿಸುವಂತೆ ಕಿರುಕುಳ ನೀಡಿದ್ದಾನೆ.

ಆರೋಪಿಯು ವೈಯಕ್ತಿಕ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಕಿರುಕುಳ ಸಹಿಸಲಾರದೆ ಬುಧವಾರ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com