ಮಾಜಿ ಸಿಎಂ ಯಡಿಯೂರಪ್ಪಗೆ ಕೇಂದ್ರ ಗೃಹ ಇಲಾಖೆಯಿಂದ ಝಡ್ ಕೆಟಗರಿ ಭದ್ರತೆ

ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ.
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on

ಬೆಂಗಳೂರು/ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ.

ಗುಪ್ತಚರ ವಿಭಾಗ (IB) ಬೆದರಿಕೆ ಮೌಲ್ಯಮಾಪನಕ್ಕೆ ಪ್ರತಿಕ್ರಿಯೆಯಾಗಿ ಅವರಿಗೆ ಗೃಹ ಸಚಿವಾಲಯ (MHA) ಝಡ್ ಕೆಟಗರಿ ಭದ್ರತೆಯನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಗೃಹ ಸಚಿವಾಲಯ ಕೈಗೊಂಡಿದೆ. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲಭೂತ ಗುಂಪುಗಳಿಂದ ಸಂಭಾವ್ಯ ಬೆದರಿಕೆಗಳಿವೆ ಎಂದು ತಿಳಿದುಬಂದಿದೆ. ಎಂಎಚ್‌ಎ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಮಾಂಡೋಗಳು ಒದಗಿಸುತ್ತಾರೆ. 

ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ, 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‌ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಅವರಿಗೆ ಪೂರಕವಾಗಿ ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು (PSO) ಹಗಲು ರಾತ್ರಿ ದಿನದ 24 ಗಂಟೆ ಕಾಯುತ್ತಿರುತ್ತಾರೆ. 

ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುವುದು. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು, ಇಬ್ಬರು ವೀಕ್ಷಕರನ್ನು ಶಿಫ್ಟ್‌ಗಳಲ್ಲಿ ನಿಯೋಜಿಸಲಾಗುವುದು, ಒಟ್ಟಾರೆ ಭದ್ರತಾ ಚೌಕಟ್ಟನ್ನು ಇನ್ನಷ್ಟು ಹೆಚ್ಚಿಸಲಾಗುತ್ತದೆ. 

ಈ ಕ್ರಮಗಳ ಜೊತೆಗೆ, ಯಡಿಯೂರಪ್ಪನವರು ಮೂರು ತರಬೇತಿ ಪಡೆದ ಚಾಲಕರನ್ನು ಹೊಂದಿರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com