ತುಮಕೂರು: ಟೊಮೆಟೊ ಬೆಲೆ ಕುಸಿತ; ರೈತ ಆತ್ಮಹತ್ಯೆಗೆ ಶರಣು

ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ತುಮಕೂರು: ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತರ ರೈತನನ್ನು ಎರ್ರಾಪಾಳ್ಯ ಗ್ರಾಮದ ನಾರಾಯಣಪ್ಪ(65) ಎಂದು ಗುರುತಿಸಲಾಗಿದೆ.

ನಾರಾಯಣಪ್ಪ ಅವರು ತಮ್ಮ ಜಮೀನಿನಲ್ಲಿ ಹೈಟೆನ್ಶನ್ ವಿದ್ಯುತ್ ಟವರ್‌ನ ಬೀಮ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

ನಾರಾಯಣಪ್ಪ ಅವರು 5 ಲಕ್ಷ ರೂಪಾಯಿ ಸಾಲ ಮಾಡಿ ಟೊಮೆಟೊ ಬೆಳೆ ಬೆಳೆದಿದ್ದರು. ಆದರೆ ಬೆಳೆ ನಷ್ಟ ಹಾಗೂ ಬೆಲೆ ಕುಸಿತದಿಂದ ಸಾಲ ಮರುಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಾರಾಯಣಪ್ಪ ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಈ ಸಂಬಂಧ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com