ಸುಳ್ಯ: ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ; ಹಾವೇರಿ ಮೂಲದ ಮೂವರು ಸಾವು, ಓರ್ವನಿಗೆ ಗಾಯ

ಸುಳ್ಯ ಸಮೀಪದ ಅಡ್ಕಾರ್ ಬಳಿ ರಸ್ತೆಬದಿಯಲ್ಲಿ ನಿಂತಿದ್ದವರಿಗೆ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸುಳ್ಯ: ಇಲ್ಲಿನ ಅಡ್ಕಾರ್ ಬಳಿ ರಸ್ತೆಬದಿಯಲ್ಲಿ ನಿಂತಿದ್ದವರಿಗೆ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಮೃತರನ್ನು ಚಂದ್ರಪ್ಪ, ರೇಗಪ್ಪ ಮತ್ತು ಮಾಂತೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಾವೇರಿಯ ರಾಣೆಬೆನ್ನೂರಿನವರು. ಇಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಕೂಡಲೇ ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರು ಕೂಲಿ ಕಾರ್ಮಿಕರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೋರ್ವ ವೆಂಕಪ್ಪ ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com