ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಬಂದ್; ಸೆ. 11ರಂದು ರಸ್ತೆಗಿಳಿಯದ ಆಟೋಗಳು, ಕ್ಯಾಬ್‌ಗಳು

ಶಕ್ತಿ ಯೋಜನೆ ಜಾರಿಯಿಂದಾಗಿ ತಮ್ಮ ಆದಾಯಕ್ಕೆ ಹೊಡೆತ ಬಿದ್ದಿದ್ದು, ಸರ್ಕಾರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಒತ್ತಾಯಿಸಿದ್ದು, ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸೆ.11ರಂದು ಬಂದ್‌ಗೆ ಕರೆ ನೀಡಲಾಗಿದೆ. ಅಂದು ನಗರದಲ್ಲಿ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳು ಸಂಚರಿಸುವುದಿಲ್ಲ ಎನ್ನಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಶಕ್ತಿ ಯೋಜನೆ ಜಾರಿಯಿಂದಾಗಿ ತಮ್ಮ ಆದಾಯಕ್ಕೆ ಹೊಡೆತ ಬಿದ್ದಿದ್ದು, ಸರ್ಕಾರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಒತ್ತಾಯಿಸಿದ್ದು, ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸೆ.11ರಂದು ಬಂದ್‌ಗೆ ಕರೆ ನೀಡಲಾಗಿದೆ. ಅಂದು ನಗರದಲ್ಲಿ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳು ಸಂಚರಿಸುವುದಿಲ್ಲ ಎನ್ನಲಾಗಿದೆ.

ಶಕ್ತಿ ಯೋಜನೆ ಜಾರಿಯಿಂದ ಆದಾಯ ನಷ್ಟ ಎದುರಿಸುತ್ತಿರುವ ಖಾಸಗಿ ಟ್ರಾವೆಲ್ ಆಪರೇಟರ್‌ಗಳಿಗೆ ಪರಿಹಾರ ನೀಡಬೇಕೆಂಬ ತಮ್ಮ ಪ್ರಮುಖ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಹೇಳಿದೆ.

ಒಕ್ಕೂಟದ ನಾಮನಿರ್ದೇಶಿತ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿದ ನಂತರ ಖಾಸಗಿ ಟ್ರಾವೆಲ್ ಆಪರೇಟರ್‌ಗಳ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ' ಎಂದರು.

ಸೆಪ್ಟೆಂಬರ್ 11ರಂದು ವಿಮಾನ ನಿಲ್ದಾಣಗಳಲ್ಲಿನ ಸೇವೆಗಳು, ಆಟೋಗಳು, ಶಾಲಾ ಬಸ್‌ಗಳು ಮತ್ತು ಎಲ್ಲಾ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಟ್ಯಾಕ್ಸಿ ಅಗ್ರಿಗೇಟರ್‌ಗಳು ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸುತ್ತವೆ ಎಂದು ಅವರು ಹೇಳಿದರು. 

ಬೆಳಗ್ಗೆ 11 ಗಂಟೆಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ರ‍್ಯಾಲಿ ಆರಂಭವಾಗಿ ಫ್ರೀಡಂ ಪಾರ್ಕ್‌ನಲ್ಲಿ ಕೊನೆಗೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com