ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತಿನ ಚೀಟಿ ತೋರಿಸಿ ಬ್ಲ್ಯಾಕ್‌ಮೇಲ್; ಬೆಳಗಾವಿ ಮೂಲದ ವ್ಯಕ್ತಿ ಬಂಧನ

ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.

ಬೆಳಗಾವಿ: ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.

ಆರೋಪಿಯನ್ನು ಸಂತೋಷ್ ಕೊಪ್ಪದ್ ಎಂದು ಗುರುತಿಸಲಾಗಿದೆ. ಈತನ ಸಹಚರ ಬೈಲಹೊಂಗಲದ ದೇಶನೂರು ನಿವಾಸಿ ವಿಶಾಲ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. 

ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಆರೋಪಿಗಳು ತಮ್ಮನ್ನು ತಾವು ಲೋಕಾಯುಕ್ತ ಅಧಿಕಾರಿಗಳಂತೆ ಬಿಂಬಿಸಿಕೊಂಡು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುವಲ್ಲಿ ನಿರತರಾಗಿದ್ದರು.

ಪಿಡಬ್ಲ್ಯುಡಿ ಅಧಿಕಾರಿಗಳು ಎಂಬ ನೆಪದಲ್ಲಿ ಆರೋಪಿಗಳಿಗೆ ದೂರವಾಣಿ ಕರೆ ಮಾಡಿ ಲಂಚ ನೀಡಲು ಸಿದ್ಧರಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅದರಂತೆ, ಅವರು ಕೊಪ್ಪದ್ ಅವರನ್ನು ಬಂಧಿಸಿದ್ದಾರೆ. ನಂತರ ಪಾಟೀಲ್ ಪರಾರಿಯಾಗಿದ್ದಾನೆ.

Related Stories

No stories found.

Advertisement

X
Kannada Prabha
www.kannadaprabha.com