ಇನ್ಮುಂದೆ ಎಸ್ ಎಸ್ ಎಲ್ ಸಿ, ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ- ಸಚಿವ ಮಧು ಬಂಗಾರಪ್ಪ

ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ  ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿಕ್ಷಣ ಸಚಿವ ಮಧು ಬಂಗಾರಪ್ಪ
Updated on

ಬೆಂಗಳೂರು: ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

ಶಿಕ್ಷಣ ಇಲಾಖೆ ಇದುವರೆಗೆ ಎರಡು ಪರೀಕ್ಷೆಗಳನ್ನು ನಡೆಸುತಿತ್ತು. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಇಲಾಖೆ ಬಿಡುಗಡೆ ಮಾಡಿದೆ. ಹೊಸ ನಿಯಮದ ಪ್ರಕಾರ ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾದರೂ ಮುಂದಿನ ತರಗತಿಗಳಿಗೆ ಹೋಗಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು. 

ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೂ ಸಹ ಅಗತ್ಯವಿರುವ ಕನಿಷ್ಠ ಅಂಕಗಳನ್ನು ಒಟ್ಟು ಎಂದು ಪರಿಗಣಿಸಲಾಗುತ್ತದೆ. ಕಲಿಕೆಯ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. 

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ''ದಿನಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಮೊದಲು ವಾರಕ್ಕೊಮ್ಮೆ ಮೊಟ್ಟೆ ನೀಡಲಾಗುತ್ತಿತ್ತು. 58 ಲಕ್ಷ ಮಕ್ಕಳಿಗೆ ಈ ಯೋಜನೆಯಿಂದ ಪ್ರಯೋಜನವಾಗಲಿದೆ. ಈ ಯೋಜನೆಗೆ ಅಂದಾಜು ಒಟ್ಟು 280 ಕೋಟಿ ರೂಪಾಯಿ ವೆಚ್ಚವಾಗಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೂ ಯೋಜನೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ಶಿಕ್ಷಣ ಇಲಾಖೆಯಲ್ಲಿ ಬೋಧಕ ಸಿಬ್ಬಂದಿ ಕೊರತೆ ಇದೆ. ಇದನ್ನು ಮನಗಂಡ ಸಿಎಂ ಸಿದ್ದರಾಮಯ್ಯ ಅವರು ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಿದ್ದು, ಇನ್ನೆರಡು ದಿನಗಳಲ್ಲಿ 10,000 ಅತಿಥಿ ಉಪನ್ಯಾಸಕರ ನೇಮಕ ಮಾಡಲಾಗುವುದು ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com