
ಸಾಂದರ್ಭಿಕ ಚಿತ್ರ
ಬೆಂಗಳೂರು: ಯುವತಿಯೊಬ್ಬಳು ತನ್ನ ಲಿವ್ ಇನ್ ಸಂಗಾತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು ಹತ್ಯೆ ಮಾಡಿದ ಮಹಿಳೆಯನ್ನು ಬೆಳಗಾವಿ ಮೂಲದ 24 ವರ್ಷದ ರೇಣುಕಾ ಎಂದು ಗುರುತಿಸಲಾಗಿದ್ದು, ಮೃತನನ್ನು ಕೇರಳ ಮೂಲದ 29 ವರ್ಷದ ಜಾವೇದ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಜಗಳೂರು: ಅಶ್ಲೀಲ ವಿಡಿಯೊ ಬೆದರಿಕೆ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ಪೋಲೀಸರ ಪ್ರಕಾರ, ಸೆಲ್ ಫೋನ್ ರಿಪೇರಿ ಮಾಡುತ್ತಿದ್ದ ರೇಣುಕಾ ಮತ್ತು ಜಾವೇದ್ ಅಕ್ಷಯನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಒಟ್ಟಿಗೆ ವಾಸವಿದ್ದರು. ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು. ಆದರೆ ಕಳೆದ ರಾತ್ರಿ ಯಾವುದೋ ವಿಷಯಕ್ಕೆ ಜಗಳ ಶುರುವಾಗಿದೆ. ಕೋಪದ ಭರದಲ್ಲಿ ರೇಣುಕಾ ಚಾಕುವಿನಿಂದ ಜಾವೇದ್ ಎದೆಗೆ ಇರಿದಿದ್ದಾಳೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತು. ಆದರೆ ಜಾವೇದ್ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರೇಣುಕಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.